ರಾಮನಗರ,ಜೂನ್,23,2023(www.justkannada.in): ಈ ಬಾರಿಯ ವಿಧಾನಸಭೆ ಚುನಾವಣೆ ಸೋಲನುಭವಿಸಿರುವ ರಾಜ್ಯ ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಯಂತೆ ಹೆಚ್ಚು ಸ್ಥಾನಗಳನ್ನ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ತಂತ್ರ ಹೆಣೆಯಲು ಯೋಚಿಸುತ್ತಿದೆ. ಈ ನಡುವೆ ಬಿಜೆಪಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಗೆ ಹೋಗಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆಯೊಂದನ್ನ ನೀಡಿದ್ದಾರೆ.
ಹೌದು, ಈ ಕುರಿತು ರಾಮನಗರದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆಯಾಗಬಹುದು. ಜೆಡಿಎಸ್ ಜೊತೆ ಹೊಂದಾಣಿಕೆ ಆಗಬಹುದು. ಬದಲಾವಣೆ ಜೊತೆ ಚುನಾವಣೆ ಎದುರಿಸುತ್ತೇವೆ. ಜೆಡಿಎಸ್ ಜತೆ ಮೈತ್ರಿ ಆಗಬಹುದು ಅಂದಿಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ಆಗಲೇಬೇಕು. ಅತಿ ಹೆಚ್ಚು ಸಂಸದರನ್ನ ಲೋಕಸಭೆಗೆ ಕಳುಹಿಸಬೇಕು. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹೇಳಿದರೇ ಸ್ಪರ್ಧಿಸುತ್ತೇನೆ. ಲೋಕಸಭೆ ಟಿಕೆಟ್ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.
Key words: BJP – LokSabha –elections-Former minister- CP Yogeshwar -hinted – JDS- alliance.