ಬೆಂಗಳೂರು,ನವೆಂಬರ್,4,2020(www.justkannada.in): ನಾಳೆ ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ಇದ್ದು ಈ ಹಿನ್ನೆಲೆ ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಮಂಗಳೂರಿಗೆ ತೆರಳಲಿದ್ದಾರೆ.
ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ9 ಬಿಜೆಪಿ ಕಾರ್ಯಕಾರಣಿ ನಡೆಯಲಿದ್ದು ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ,ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ, ಪ್ರಹ್ಲಾದ್ ಜೋಶಿ ಸೇರಿ ರಾಜ್ಯ ಸಮಿತಿ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ.
ನಾಳೆ ಇಡೀ ದಿನ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ತೊಡಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: BJP–meeting- tomorrow- CM BS yeddyurappa- Mangalore -today.