ಕೋಲಾರ,ಸೆಪ್ಟಂಬರ್,14,2024 (www.justkannada.in): ಜೀವ ಬೆದರಿಕೆ ಜಾತಿ ನಿಂದನೆ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ನಂಗಲಿ ಬಳಿ ಶಾಸಕ ಮುನಿರತ್ನ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದು ಇದೀಗ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ.
ಕೋಲಾರದಿಂದ ಆಂಧ್ರದ ಚಿತ್ತೂರಿಗೆ ಶಾಸಕ ಮುನಿರತ್ನ ತೆರಳುತ್ತಿದ್ದರು. ಈ ವೇಳೆ ಫೋನ್ ಲೋಕೇಷನ್ ಆಧಾರದ ಮೇಲೆ ಮುನಿರತ್ನ ಅವರನ್ನ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ತನಗೆ ಲಂಚಕ್ಕೆ ಬೇಡಿಕೆ ಇಟ್ಟು, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಶಾಸಕ ಮುನಿರತ್ನ ವಿರುದ್ದ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರು ದೂರು ದಾಖಲಿಸಿದ್ದರು.
Key words: BJP, MLA, Muniratna, police, custody