ಬೆಂಗಳೂರು,ಆಗಸ್ಟ್,26,2023(www.justkannada.in): ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.
ಸಿಎಂ ಸಿದ್ಧರಾಮಯ್ಯ ಜೊತೆ ಶಾಸಕ ಶಿವರಾಂ ಹೆಬ್ಬಾರ್ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ, ಕ್ಷೇತ್ರದಲ್ಲಿ ಶೇ 70 ಕ್ಕಿಂತ ಕಡಿಮೆ ಮಳೆ ಆಗಿರುವ ಹಿನ್ನಲೆಯಲ್ಲಿ ಬರಪೀಡಿತ ತಾಲೂಕು ಘೋಷಣೆ ಮಾಡುವಂತೆ ಶಿವರಾಂ ಹೆಬ್ಬಾರ್ ಮನವಿ ಮಾಡಿದ್ದಾರೆ. ಅಲ್ಲದೆ ಕ್ಷೇತ್ರಕ್ಕೆ ಹೆಚ್ಚಿನ ಅನುಧಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಆಪರೇಷನ್ ಹಸ್ತದ ಮೂಲಕ ಶಿವರಾಮ್ ಹೆಬ್ಬಾರ್ ಬಿಜೆಪಿ ತೊರೆದು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆಂಬ ವಂದತಿಗಳು ಹಬ್ಬಿದ್ದವು. ಈ ಕುರಿತು ಶಿವರಾಮ್ ಹೆಬ್ಬಾರ್ ಮಾತನಾಡಿ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಸೇರುವುದಿಲ್ಲ ಎಂದು ಹೇಳಿದ್ದರು.
Key words: BJP -MLA -Shivram Hebbar-meet- CM Siddaramaiah