ಬೆಂಗಳೂರು,ಅಕ್ಟೋಬರ್,13,2022(www.justkannada.in): ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಗೆ ಕೋರ್ಟ್ 2 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.
ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪದ ಮೇಲೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ಬೆಂಗಳೂರಿನ ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್ ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಇಂದು(ಅಕ್ಟೋಬರ್. 13) ಆದೇಶ ಹೊರಡಿಸಿದೆ.
2 ಕ್ರಿಮಿನಲ್ ಪ್ರಕರಣ ಮಾಹಿತಿ ಹಾಗೂ ಕಂಪನಿಯ ಹುದ್ದೆಯ ಮಾಹಿತಿ ಮುಚ್ಚಿಟ್ಟ ಆರೋಪ ಕೇಳಿ ಬಂದಿತ್ತು.ಈ ಸಂಬಂಧ ಹೆಚ್ ಜಿ ಪ್ರಶಾಂತ್ ಎಂಬುವವರು ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ ಕಾಯ್ದೆ ಸೆಕ್ಷನ್ 125 ಎ ಅಡಿ ಆರೋಪ ಸಾಬೀತಾಗಿದ್ದು ಕೋರ್ಟ್ ಶಾಸಕ್ ಉದಯ್ ಗರುಡಾಚಾರ್ ಜೈಲು ಶಿಕ್ಷೆ ವಿಧಿಸಿದೆ.
ಜಾಮೀನು ಮಂಜೂರು
3 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗಿರುವ ಹಿನ್ನೆಲೆ ಶಾಸಕ ಉದಯ್ ಗರುಡಾಚಾರ್ ಅವರಿಗೆ ಜಾಮೀನು ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. 25,000 ರೂಪಾಯಿ ಬಾಂಡ್, ಶ್ಯೂರಿಟಿ ಒದಗಿಸಲು ನ್ಯಾಯಾಧೀಶ ಜೆ.ಪ್ರೀತ್ ಸೂಚನೆ ನೀಡಿದ್ದಾರೆ. ಇದರಿಂದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಸದ್ಯ ರಿಲೀಫ್ ಸಿಕ್ಕಂತಾಗಿದೆ.
Key words: BJP MLA -Uday Garudachar- jailed – 2 months