ಮೈಸೂರು,ಫೆಬ್ರವರಿ,4,2025 (www.justkannada.in): ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯ ವಕ್ತಾರರಾಗಿರುವ ಲಕ್ಷ್ಮಣ್ ಕೇವಲ ಮೈಸೂರಿಗೆ ಸೀಮಿತವಾಗಿದ್ದಾರೆ ಎಂದು ಮೈಸೂರು ಬಿಜೆಪಿ ವಕ್ತಾರ ಮೋಹನ್ ವಾಗ್ದಾಳಿ ನಡೆಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ಬಿಜೆಪಿ ವಕ್ತಾರ ಮೋಹನ್, ಕೇಂದ್ರ ಬಜೆಟ್ ಜನಪರವಾಗಿದೆ. ಲಕ್ಷ್ಮಣ್ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರು ಮಾಡುತ್ತಿರುವ ಆರೋಪಗಳಲ್ಲಿ ಸತ್ಯಾಂಶವಿಲ್ಲ. ಮೈಸೂರು-ಬೆಂಗಳೂರು ಜೋಡಿ ರೈಲು ಮಾರ್ಗ ಪೂರ್ಣಗೊಳ್ಳಲು ಪ್ರತಾಪ್ ಸಿಂಹ ಬರಬೇಕಾಯಿತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೈಸೂರು ಜಿಲ್ಲೆಗೆ ಸಾಕಷ್ಟು ಅನುದಾನವನ್ನು ನೀಡಲಾಗಿದೆ. ಇದನ್ನು ಸಹಿಸಲಾಗದ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಕಾಂಗ್ರೆಸ್ ಸಂಸದರು ಏನು ಮಾಡಿದ್ದಾರೆಂದು ತಿಳಿಸಲಿ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಮೈಸೂರು ಜಿಲ್ಲೆಗೆ ಏನು ಮಾಡಿದ್ದಾರೆಂದು ತಿಳಿಸಲಿ. ಕಾಂಗ್ರೆಸ್ ನವರು 60 ವರ್ಷದಲ್ಲಿ ಮಾಡಲಾಗದ್ದನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾಗಿದೆ. ನರೇಂದ್ರ ಮೋದಿಯವರ ಆಡಳಿತದ ಅವಧಿಯಲ್ಲಿ ದೇಶದ ಸಮಗ್ರ ಅಭಿವೃದ್ಧಿ ಆಗಿದೆ ಎಂದು ಮೋಹನ್ ಹರಿಹಾಯ್ದರು.
Key words: M. Laxman, limited, Mysore, only, BJP, Mohan