ರಾಯಚೂರು,ನ,13,2019(www.justkannada.in): ಇಂದಿನ ತೀರ್ಪಿನಿಂದ ಬಿಜೆಪಿಗೆ ನೈತಿಕತೆ ಇದ್ದರೆ ಅನರ್ಹರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು. ಟಿಕೆಟ್ ನೀಡದೆ ನೈತಿಕತೆ ಪ್ರದರ್ಶಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸವಾಲು ಹಾಕಿದರು.
ಸುಪ್ರೀಂಕೋರ್ಟ್ ತೀರ್ಪು ಕುರಿತು ರಾಯಚೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಡ್ಜಮೆಂಟ್ ಓದಬೇಕಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸುತ್ತೇನೆ. ಅತೃಪ್ತ ಶಾಸಕರು ಅನರ್ಹರಾಗಿದ್ದಾರೆ.ಈ ಶಾಸಕರು ದುರುದ್ದೇಶದಿಂದ ಸರ್ಕಾರ ಬೀಳಿಸಲು ಷಡ್ಯಂತ್ರ ರೂಪಿಸಿದ್ದರು ಎಂಬುವುದು ಸಾಬೀತಾಗಿದೆ. ಶಾಸಕರು ಸ್ಪರ್ಧಿಸಲು ಅವಕಾಶ ನೀಡಿದ್ದು ಸ್ಪರ್ಧಿಸಲಿ. ರಮೇಶ್ ಕುಮಾರ ಮಾತ್ರ ಅವರು ಮರು ಚುನಾವಣೆಗೆ ಸ್ಪರ್ಧಿಸದಂತೆ ಹೇಳಿದ್ದರು. ಸುಪ್ರೀಂ ಕೋರ್ಟ್ ಹೇಳಿದ್ದು ಸರಿಯಾಗಿದೆ. ಸುಪ್ರೀಂ ಕೋರ್ಟು ತೀರ್ಪು ನಮಗೆ ದುಃಖವಿಲ್ಲ ಎಂದರು.
ತಮ್ಮ ಸ್ಥಾನವನ್ನು ಮಾರಿಕೊಳ್ಳುವವರ ವಿರುದ್ದ ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕಾಗಿದೆ. ಇಂದಿನ ತೀರ್ಪಿನಿಂದ ಬಿಜೆಪಿಗೆ ನೈತಿಕತೆ ಇದ್ದರೆ ಅನರ್ಹರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು. ಟಿಕೆಟ್ ನೀಡಿದರೆ ಸಂವಿಧಾನ ಬಾಹಿರವಾಗಿ ಕೆಲಸ ಮಾಡಿದಂತಾಗುತ್ತದೆ. ಯಡಿಯೂರಪ್ಪ ಹಾಗೂ ಅಮಿತ್ ಶಾ ಸಂವಿಧಾನ ಬಾಹಿರ ಕೆಲಸ ಮಾಡಿದಂತಾಗುತ್ತದೆ ಎಂದು ಕಿಡಿಕಾರಿದರು.
ಬಿಜೆಪಿಯವರಿಗೆ ನೈತಿಕ ಅಧಃಪತನವಾಗಿದೆ. ಅದಕ್ಕಾಗಿ ನೈತಿಕವಾಗಿ ಯಡಿಯೂರಪ್ಪ ರಾಜೀನಾಮೆ ನೀಡಬೇಕು. ಅವರಿಗೆ ನೈತಿಕತೆ ಇದೆಯೂ ಇಲ್ಲವೊ ಗೊತ್ತಿಲ್ಲ. ಈ ಸರ್ಕಾರ ರಚನೆಯಾಗಿದ್ದೆ ಇಲ್ಲೀಗಲ್. ಈ ಸರ್ಕಾರ ಭ್ರಷ್ಟಾಚಾರದಿಂದ ರಚನೆಯಾದ ಸರ್ಕಾರ. ಕಾನೂನು ಬಾಹಿರ ಸರ್ಕಾರವೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
Key words: BJP -morality -ticket – disqualified- MLA-KPCC President -Dinesh Gundurao