ಬೆಂಗಳೂರು,ಜುಲೈ,12,2024 (www.justkannada.in): ಮುಡಾ ಹಗರಣ ಖಂಡಿಸಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ಬಿಜೆಪಿ ಮೈಸೂರು ಚಲೋ ಹಮ್ಮಿಕೊಂಡಿದ್ದು ಇದರಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ತೆರಳುತ್ತಿದ್ದ ವೇಳೆ ಕುಂಬಳಗೋಡುವಿನ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ ವಿಜಯೇಂದ್ರ , ಶಾಸಕ ಮುನಿರತ್ನ ಸೇರಿ ಹಲವು ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.
ಮುಡಾ’ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿದೆ. ಈ ವೇಳೆ ಮಾತನಾಡಿದ ಬಿವೈ ವಿಜಯೇಂದ್ರ, ನಮ್ಮ ಮೈಸೂರು ಚಲೋ ತಡೆಯಬೇಡಿ. ನಮ್ಮನ್ನ ತಡೆದ್ರೆ ರಾಜ್ಯದಲ್ಲಿ ಬೆಂಕಿ ಬೀಳುತ್ತೆ ರಾಹುಲ್ ಗಾಂಧಿಗೆ ರಾಜ್ಯದ ಹಣ ಹೋಗ್ತಾ ಇದೆ. ರಾಜ್ಯ ಸರ್ಕಾರದ ಪಾಪದ ಕೊಡ ತುಂಬಿದೆ. ಸಿದ್ಧರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
Key words: BJP, Mysore Chalo, BY Vijayendra, protest