ಹುಬ್ಬಳ್ಳಿ,ಜ,28,2020(www.justkannada.in): ಬಿಜೆಪಿ ರಾಷ್ಟ್ರೀಯ ನಾಯಕರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಸ್ವಾತಂತ್ರ್ಯ ಕೊಡುತ್ತಿಲ್ಲ. ಸಂಪುಟ ವಿಸ್ತರಣೆಗೆ ಅನುಮತಿ ನೀಡಿಲ್ಲ. ಹೀಗಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಬಿಜೆಪಿ ರಾಷ್ಟ್ರೀಯ ನಾಯಕರು ಯಡಿಯೂರಪ್ಪನವರಿಗೆ ಅನುಮತಿ ನೀಡಿಲ್ಲ. ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲವಾಗಿದೆ. ಬಿಜೆಪಿ ರಾಷ್ಟ್ರೀಯ ನಾಯಕರು ಯಡಿಯೂರಪ್ಪನವರಿಗೆ ಸ್ವಾತಂತ್ರ್ಯ ಕೊಡುತ್ತಿಲ್ಲ. ಹೀಗಾಗಿ ಯಡಿಯೂರಪ್ಪ ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ಲೇವಡಿ ಮಾಡಿದರು.
ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಹಣ ಬಿಡುಗಡೆಯಾಗುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಪಾಲನ್ನು ಕೇಂದ್ರ ಸರ್ಕಾರ ನೀಡಿಲ್ಲ ಎಂದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ಪೌರತ್ವ ತಿದ್ದುಪಡಿ ಕಾಯಿದೆ ಸಂವಿಧಾನ ವಿರೋಧಿಯಾಗಿದೆ. ಜಾತಿ ಧರ್ಮದ ಆಧಾರದಲ್ಲಿ ಕಾಯ್ದೆ ಜಾರಿ ಮಾಡಿದ್ದಾರೆ. ಕಾಂಗ್ರೆಸ್ ಈ ಕಾಯ್ದೆಯನ್ನು ಸಂಪೂರ್ಣವಾಗಿ ವಿರೋಧಿಸುತ್ತದೆ. ಇನ್ನು ಸಿಎಎ ವಿರುದ್ಧದ ಹೋರಾಟಕ್ಕೆ ಪಿಎಫ್ಐ ನಿಂದ ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಆಗಲಿ. ಆರೋಪ ಸಾಬೀತುಪಡಿಸಲಿ. ಅಕ್ರಮವಾಗಿ ಹಣ ನೀಡಿದ್ದೇ ಆದಲ್ಲಿ ಸೂಕ್ತ ಕ್ರಮಕೈಗೊಳ್ಳಲಿ ಎಂದು ಸಿದ್ದರಾಮಯ್ಯ ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಸಿದ್ಧರಾಮಯ್ಯ, ಕೆಪಿಸಿಸಿಗೆ ಶೀಘ್ರವೇ ನೂತನ ಅಧ್ಯಕ್ಷರನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ. ಕಾಂಗ್ರೆಸ್ ಕೇಂದ್ರ ನಾಯಕರು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ತೀರ್ಮಾನ ಪ್ರಕಟಿಸಲಿದ್ದಾರೆ ಎಂದರು.
Key words: BJP -national leaders- not -given –freedom-CM BSY-Siddaramaiah