ಒಳ್ಳೆಯ ಕೆಲಸ  ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ- ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 26,2024 (www.justkannada.in):  ಮೈಸೂರಿನ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ  ಎಂಬ ಹೆಸರಿಡುವುದಕ್ಕೆ ವಿಪಕ್ಷ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ,  ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಟೀಕಿಸಿದರು.

ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ. ಆದರೆ ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದರು.

Key words: BJP,  oppose, good work , CM Siddaramaiah