ಬೆಂಗಳೂರು,ಡಿಸೆಂಬರ್,7,2024 (www.justkannada.in): ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಮಾಜಿ ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಪಿ.ರಾಜೀವ್, ಬಾಣಂತಿಯರ ಶವದ ಮೇಲೆ ಕಾಂಗ್ರೆಸ್ ಸಮಾವೇಶ ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಬೇಕು. ಸಚಿವ ಸಂಪುಟದಿಂದ ದಿನೇಶ್ ಗುಂಡೂರಾವ್ ವಜಾ ಮಾಡಬೇಕು. ಮೃತರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಸರ್ಕಾರದ ನಿರ್ಲಕ್ಷ್ಯದಿಂದ ಬಾಣಂತಿಯರ ಸಾವಾಗಿದೆ. ಹೀಗಾಗಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು. ಈ ಬಗ್ಗೆ ಸದನದಲ್ಲೂ ಬಿಜೆಪಿ ಹೋರಾಟ ಮಾಡಲಿದೆ ಎಂದು ಪಿ.ರಾಜೀವ್ ತಿಳಿಸಿದರು.
Key words: BJP, P. Rajiv, demands, Dinesh Gundu Rao, resignation