ಬೆಂಗಳೂರು,ಡಿಸೆಂಬರ್,31,2024 (www.justkannada.in): ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹೋರಾಟ ತೀವ್ರಗೊಳಿಸಿರುವ ಬಿಜೆಪಿ ಇದೀಗ ಪೋಸ್ಟರ್ ಅಭಿಯಾನ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.
ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಪೋಸ್ಟರ್ ಅಭಿಯಾನ ನಡೆಸಿದ್ದಾರೆ. ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಂಎಲ್ ಸಿಗಳಾದ ಸಿ.ಟಿ.ರವಿ ರವಿಕುಮಾರ್ ಅವರು ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆಯಲ್ಲಿ ಪೋಸ್ಟರ್ ಅಂಟಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಖರ್ಗೆ ಪ್ರಾಯೋಜಿತ ಸುಪಾರಿ, ಸುಪಾರಿ ಸ್ಪಾನ್ಸರ್ ಖರ್ಗೆ ಎಂಬ ಪೋಸ್ಟರ್ ಅಂಟಿಸಿದ ಬಿಜೆಪಿ ನಾಯಕರು, ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಬಿಜೆಪಿ ಪೋಸ್ಟರ್ ಅಭಿಯಾನ ಹಿನ್ನೆಲೆಯಲ್ಲಿ ಸದಾಶಿವನಗರದಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಭದ್ರತೆ ವಹಿಸಲಾಗಿದೆ.
Key words: BJP, poster campaign, resignation, Minister, Priyank Kharge