ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಬಿಎಸ್ ವೈ, ಅಶೋಕ್ ಸೇರಿ ಹಲವರು ಪೊಲೀಸರ ವಶಕ್ಕೆ

ಬೆಂಗಳೂರು,ಏಪ್ರಿಲ್,3,2025 (www.justkannada.in):  ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ  ಮಾಡಿ ಜನಸಾಮಾನ್ಯರಿಗೆ ಶಾಕ್ ಮೇಲೆ ಶಾಕ್ ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆಗೆ ಯತ್ನ ನಡೆಸಿದರು.

ಫ್ರೀಡಂಪಾರ್ಕ್ ನಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು  ವಿಧಾನಸಭೆ ವಿಪಕ್ಷ ನಾಯಕರ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಮುಖಂಡರು, ಕಾರ್ಯಕರ್ತರು ಮುಂದಾದರು.

ಈ ವೇಳೆ ಫ್ರೀಡಂಪಾರ್ಕ್ ನಲ್ಲೇ ಪೊಲೀಸರು ಬ್ಯಾರಿಕೇಡ್ ಹಾಕಿ  ಬಿಜೆಪಿ ಪ್ರತಿಭಟನೆಗೆ ತಡೆಯೊಡ್ಡಿದ್ದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಇಡೀ ಪ್ರಪಂಚ ಅಚ್ಚರಿ ಪಡುವ ರೀತಿ ದೇಶ ಅಭಿವೃದ್ದಿಯಾಗುತ್ತಿದೆ. ಈ ವೇಳೆ ಸಿದ್ದರಾಮಯ್ಯ,  ಡಿಕೆ ಶಿವಕುಮಾರ್ ಎಲ್ಲದರ ಮೇಲೆ ತೆರಿಗೆ ಹಾಕಿದ್ದಾರೆ. ಸಾಮಾನ್ಯ ಜನ ಬದುಕಲು ಆಗದಷ್ಟು ತೆರಿಗೆ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಅಧಿಕಾರ ಬಿಟ್ಟು ತೊಲಗಿ ಡಿಕೆ ಶಿವಕುಮಾರ್ ಅವರೇ ಜನರ ಭಾವನೆ ಅರ್ಥ ಮಾಡಿಕೊಳ್ಳಿ  ಜನರು ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಅರ್ಥ ಮಾಡಿಕೊಳ್ಳಿ.  ಕಾಂಗ್ರೆಸ್ ಅಧಿಕಾರ ಬಿಟ್ಟು ಹೋಗುವವರೆಗೂ ನಮ್ಮ ಹೋರಾಟ ಇರಲಿದೆ ಎಂದರು.

Key words: condemn, price hike, BJP, Protest, BSY,  R.Ashok