ಕೊಡಗು,ಏಪ್ರಿಲ್,5,2025 (www.justkannada.in): ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಹತ್ಯೆ ಖಂಡಿಸಿ ಶಾಸಕರ ವಿರುದ್ದ ಎಫ್ ಐಆರ್ ಗೆ ಆಗ್ರಹಿಸಿ ಡಿವೈಎಸ್ ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು.
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಹತ್ಯೆ ಖಂಡಿಸಿ ಕೊಡುಗು ಜಿಲ್ಲೆ ಕುಶಾಲನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಡಿವೈಎಸ್ಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದರು.
ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ತಳ್ಳಾಟ ನೂಕಾಟ ನಡೆಯಿತು. ನಂತರ ಪೊಲೀಸರು ಬಿವೈ ವಿಜಯೇಂದ್ರ, ಸಂಸದ ಯದುವೀರ್, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದರು.
Key words: Vinay Somanna, Suicide, BJP, BY Vijayendra, Protest