ಬೆಳಗಾವಿ,ಡಿಸೆಂಬರ್,23,2024 (www.justkannada.in): ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಚರಣೆ ವೇಳೆ ಬಿಜೆಪಿಯವರು ಪ್ರತಿಭಟನೆಗೆ ತೀರ್ಮಾನಿಸಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿದ್ದಾನೆ. ಬಿಜೆಪಿಯವರ ಪ್ರತಿಭಟನೆಗೆ ನಾನು ಹೆದರುವುದಿಲ್ಲ. ಮಹಾತ್ಮಾ ಗಾಂಧೀಜಿ ಅವರ ಸ್ಮರಣೆ ಮಾಡುವ ಆಚರಣೆ ವೇಳೆ ಪ್ರತಿಭಟನೆ ಮಾಡುತ್ತೇವೆ ಎಂದರೆ ನಾವು ಹೆದರುತ್ತೇವಾ? ಎಂದು ಟಾಂಗ್ ಕೊಟ್ಟರು.
ಸಿ.ಟಿ ರವಿ ಅವರನ್ನು ಫೇಕ್ ಎನ್ ಕೌಂಟರ್ ಮಾಡುವ ಹುನ್ನಾರ ನಡೆದಿತ್ತು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ , ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹಸಚಿವರು, ಪೊಲೀಸರು ಉತ್ತರ ನೀಡುತ್ತಾರೆ. ನಾನು ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ ಎಂದರು.
Key words: BJP, protest, centenary, celebrations, DCM, DK Shivakumar