ಬೆಂಗಳೂರು,ಅಕ್ಟೋಬರ್,16,2023(www.justkannada.in): ಪಂಚರಾಜ್ಯಗಳಿಗೆ ಕಾಂಗ್ರೆಸ್ ನಿಂದ ಹಣ ಪೂರೈಕೆ ಆರೋಪ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಯಾರಿಗೆ ಏನು ಉತ್ತರ ಕೊಡಬೇಕು ಕೊಡುತ್ತೇವೆ. ಹೈವೋಲ್ಟೇಜ್ ಗೂ ಕೊಡುತ್ತೇವೆ, ಲೋವೋಲ್ಟೇಜ್ ಗೂ ಉತ್ತರ ಕೊಡುತ್ತೇವೆ. ನಕಲಿಗೂ ಉತ್ತರಿಸುತ್ತೇವೆ, ಲೂಟಿಗಳಿಗೂ ಉತ್ತರ ಕೊಡುತ್ತೇವೆ.
ಎಲ್ಲ ವಿಚಾರಗಳ ಬಗ್ಗೆಯೂ ಬಿಚ್ಚಿಡುತ್ತೇನೆ. ಬಿಜೆಪಿಗರು ಪ್ರತಿಭಟಿಸಲಿ, ಲೂಟಿಕೊರರು ಪ್ರತಿಭಟನೆ ಮಾಡಲಿ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.
Key words: BJP- protest- I will- answer – DCM -DK Shivakumar