ಮೈಸೂರು,ಜುಲೈ,12,2024 (www.justkannada.in): ಮುಡಾ ಹಗರಣವನ್ನ ಸಿಬಿಐ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಡಾ ಹಗರಣ ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅಶ್ವಥ್ ನಾರಾಯಣ್ , ಸಂಸದ ಯದುವೀರ್ಮ ಶಾಸಕ ಶ್ರೀವತ್ಸ ಸೇರಿ ಬಿಜೆಪಿ ನಾಯಕರು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕರೆದೊಯ್ದರು.
ಪ್ರತಿಭಟನೆ ವೇಳೆ ಬಿಜೆಪಿ ನಾಯಕರು ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ವಿರುದ್ದ ಘೋಷಭೆ ಕೂಗಿದರು. ಈ ವೇಳೆ ಮಾತನಾಡಿದ ಆರ್.ಅಶೋಕ್, ಸರ್ಕಾರ ನಮ್ಮ ಪ್ರತಿಭಟನೆ ಹತ್ತಿಕ್ಕಿದೆ. ಈ ಹಿನ್ನೆಲೆಯಲ್ಲಿ ಗೂಡ್ಸ್ ವಾಹನದಲ್ಲಿ ನಾನು ಮೈಸೂರಿಗೆ ಬಂದಿದ್ದೇನೆ. ಮುಡಾದಲ್ಲಿ 2 ಸಾವಿರ ಕೋಟಿ ರೂ ಭ್ರಷ್ಟಾಚಾರ ನಡೆದಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಮುಡಾ ಹಗರಣ ತನಿಖೆ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
Key words: BJP, protest, Mysore, muda, scam