ಬೆಂಗಳೂರು,ಜುಲೈ,5,2023(www.justkannada.in): ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ಬಿಜೆಪಿ ನಾಯಕರು ಸದನದ ಒಳಗೆ ಮತ್ತು ಹೊರಗೆ ನಡೆಸಿದ ಪ್ರತಿಭಟನೆ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಈ ಕುರಿತು ಸದನದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಬಿಜೆಪಿ ಪ್ರತಿಭಟನೆ ಪಶ್ಚಾತ್ತಾಪದ ಪ್ರತಿಭಟನೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ದೆಹಲಿಯಲ್ಲಿ ಪ್ರತಿಭಟಿಸಿ. ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧರಣಿ ನಡೆಸಲಿ ಎಂದು ಹೇಳಿದರು.
ತೈಲ ಬೆಲೆ ಕುಸಿದಿದ್ದರೂ ಪೆಟ್ರೋಲ್, ಡೀಸೆಲ್ ದರ ಇಳಿಸಿಲ್ಲ. ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸದಿದ್ದರಿಂದ ಬೆಲೆ ಏರಿಕೆಯಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
Key words: BJP- protest -repentance-DCM- DK Shivakumar