ಬೆಳಗಾವಿ,ಡಿಸೆಂಬರ್,12,2024 (www.justkannada.in): ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸಿ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.
ಬೆಳಗಾವಿ ಸುವರ್ಣಸೌಧದ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಲಿಂಗಾಯತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ 23 ಬಿಜೆಪಿ ಶಾಸಕರು 16 ಎಂಎಲ್ ಸಿಗಳು, ಕೆಲ ಜೆಡಿಎಸ್ ಸದಸ್ಯರು ಭಾಗಿಯಾಗಿದ್ದರು. ಪ್ರತಿಭಟನೆಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದೂರ ಉಳಿದಿದ್ದರು.
Key words: BJP, protests, against, lathicharge, Panchamasali