ಮೈಸೂರು,ಮಾರ್ಚ್,24,2025 (www.justkannada.in): ಹನಿಟ್ರ್ಯಾಪ್ ವಿಚಾರ ಮತ್ತು 18 ಬಿಜೆಪಿ ಶಾಸಕರ ಅಮಾನತು ಖಂಡಿಸಿ ಮೈಸೂರಿನಲ್ಲಿ ಜಿಲ್ಲಾ, ನಗರ ಬಿಜೆಪಿ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಯಿತು.
ನಗರದ ರಾಮಸ್ವಾಮಿ ವೃತ್ತದ ಬಳಿ ಮೈಸೂರು ಜಿಲ್ಲಾ ನಗರ ಬಿಜೆಪಿ ಮುಖಂಡರು ಕಾರ್ಯಕರ್ತರು ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಕಿಡಿಕಾರಿದರು. ಹನಿಟ್ರ್ಯಾಪ್ ವಿಚಾರ, 18 ಬಿಜೆಪಿ ಶಾಸಕರನ್ನ ಅಮಾನತು ಮಾಡಿದ ಸ್ಪೀಕರ್ ನಡೆಗೆ ಖಂಡನೆ ವ್ಯಕ್ತಪಡಿಸಿದರು. ಹಾಗೆಯೇ ಮುಸ್ಲೀಮ್ ಮೀಸಲಾತಿಗೆ ವಿರೋಧಿಸಿ ‘ಹಲಾಲ್ ಸರ್ಕಾರ’ ಎಂದು ಭಿತ್ತಿಪತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕೆಆರ್ ಕ್ಷೇತ್ರದ ಶಾಸಕ ಶ್ರೀವತ್ಸ ಸೇರಿ ನೂರಾರು ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
Key words: BJP, protests, against, government, Mysore