ಬೆಂಗಳೂರು,ಅಕ್ಟೋಬರ್,13,2023(www.justkannada.in): ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ 40 ಕೋಟಿ ರೂ. ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ,ಡಿಸಿಎಂ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ನಳೀನ್ ಕುಮಾರ್ ಕಟೀಲ್, ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ವೇಳೆ 40 ಕೋಟಿ ರೂ. ಪತ್ತೆಯಾಗಿದೆ. ಕರ್ನಾಟಕದಲ್ಲಿ ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ. ಈ ಹಿಂದೆ 600 ಕೋಟಿ ರೂ ರಿಲೀಸ್ ಮಾಡಿತ್ತು. ಈಗ ಸಿಕ್ಕಿರುವ 40 ಕೋಟಿ ರೂ ಹಣ ಕಮಿಷನ್ ಹಣ ಎಂಬ ಮಾಹಿತಿ ಇದೆ. ಹೀಗಾಗಿ ನೈತಿಕಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ಡಿಕೆ ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಮಾತನಾಡಿದ ಬಿಜೆಪಿ ಎಂಎಲ್ ಸಿ ಎನ್. ರವಿಕುಮಾರ್, ಗುತ್ತಿಗೆದಾರ ಸಂಘದವರು ಬಾಕಿ ಬಿಲ್ ಬಿಡುಗಡೆಗೆ ಒತ್ತಾಯಿಸಿದ್ದರು. ಸರ್ಕಾರ ಪರ್ಸೆಂಟೇಜ್ ಮಾತಾಡಿ 650 ಕೋಟಿ ರೂ. ಬಿಡುಗಡೆ ಮಾಡಿತ್ತು. 650 ಕೋಟಿ ರೂ. ಪೈಕಿ 42 ಕೋಟಿ ರೂ. ಕಮಿಷನ್ ಹಣ. ನೈತಿಕ ಹೊಣೆಹೊತ್ತು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
Key words: BJP- state president -Naleen Kumar Kateel -demanded – resignation –CM-DCM