ಬೆಂಗಳೂರು,ಮೇ,12,2023(www.justkannada.in): ಬಿಜೆಪಿಗೆ 120ಕ್ಕೂ ಹೆಚ್ಚು ಸ್ಥಾನ ಸಿಗುವುದು ಖಚಿತವಾಗಿದ್ದು, ಜೆಡಿಎಸ್ ಜೊತೆ ಮೈತ್ರಿ ಸಾಧಿಸುವ ಪ್ರಮಯವೇ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಮಾಡಿ ಚರ್ಚಿಸಿದ ಬಳಿಕ ಮಾತನಾಡಿದ ಮುರುಗೇಶ್ ನಿರಾಣಿ, ಬಿಜೆಪಿ ಖಚಿತವಾಗಿ 108 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು 35 ಸ್ಥಾನಗಳಲ್ಲಿ ಗೆಲ್ಲುವ ಅವಕಾಶ ಶೇ. 50ರಷ್ಟಿದೆ, ಹಾಗಾಗಿ ತಮ್ಮ ಬುಟ್ಟಿಗೆ 120ಕ್ಕಿಂತ ಹೆಚ್ಚು ಸ್ಥಾನಗಳು ಬರುವುದು ಖಚಿತ ಎಂದು ಹೇಳಿದರು.
ಜೆಡಿಎಸ್ ಜೊತೆ ಮೈತ್ರಿ ಸಾಧಿಸುವ ಪ್ರಮೇಯವೇ ಉದ್ಭವಿಸುವುದಿಲ್ಲ. ಅಂತಹ ಸಂದರ್ಭವೇನಾದರೂ ಬಂದರೇ ಪಕ್ಷದ ಮುಖಂಡರು ತೀರ್ಮಾನ ಮಾಡುತ್ತಾರೆ ಎಂದು ಮುರುಗೇಶ್ ನಿರಾಣಿ ತಿಳಿಸಿದರು.
Key words: BJP – sure – more than -120 seats-Murugesh Nirani.