ಮೈಸೂರು,ಅಕ್ಟೋಬರ್,30,2020(www.justkannda.in) : ಉಪಚುನಾವಣೆಗಳಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸುವ ಮೂಲಕ ರೈತ, ಕಾರ್ಮಿಕ ವಿರೋಧಿ ಮಸೂದೆಗಳನ್ನು ತಂದಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಹಸಿರುಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮನವಿ ಮಾಡಿದ್ದಾರೆ.ಶುಕ್ರವಾರ ಜಲದರ್ಶಿನಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಡಗಲಪುರ ನಾಗೇಂದ್ರ, ಸರ್ಕಾರ ಸುಗ್ರೀವಾಜ್ಞೆಗಳ ಮೂಲಕ ರೈತರ ಬದುಕನ್ನು ಸರ್ವ ನಾಶ ಮಾಡಲು ಹೊರಟಿದೆ. ರೈತ, ಕಾರ್ಮಿಕ ವಿರೋಧಿ ಮಸೂದೆಗಳನ್ನು ತಂದಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಹೀಗಾಗಿ ಶಿರಾ ಹಾಗೂ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಸೋಲಿಸಿ ಬುದ್ದಿಕಲಿಸಬೇಕು ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.
ಕರಪತ್ರ ಬಿಡುಗಡೆ ಮಾಡಿ ಮತದಾರರಿಗೆ ವಿನಂತಿ
ಈಗಾಗಲೇ ಶಿರಾದಲ್ಲಿ ಕರಪತ್ರ ಬಿಡುಗಡೆ ಮಾಡಿ ಮತದಾರರಿಗೆ ವಿನಂತಿ ಮಾಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲೂ ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ಜನರಿಗೆ ಮನವರಿಕೆ ಮಾಡುತ್ತಿದ್ದೇವೆ. ರೈತ ವಿರೋಧಿ ಮಸೂದೆಗಳ ಬಗ್ಗೆ ಜಾಗೃತಿ ಮೂಡಿಸಲು ಹಿರಿಯ ಸ್ವಾತಂತ್ರ್ಯ. ಹೋರಾಟಗಾರರು, ಚಿಂತಕರು, ಸಾಹಿತಿಗಳು ಬೆಂಬಲ ನೀಡಿದ್ದಾರೆ ಎಂದರು.
ನವೆಂಬರ್ 5ರಂದು ಹೆದ್ದಾರಿ ತಡೆ ಚಳುವಳಿ
ಈ ಜನ ವಿರೋಧಿ ಮಸೂದೆಗಳ ವಿರುದ್ಧ ನವೆಂಬರ್ 5ರಂದು ಹೆದ್ದಾರಿ ತಡೆ ಚಳುವಳಿ. ರಾಜ್ಯಾದ್ಯಂತ ಹೆದ್ದಾರಿಗಳನ್ನು ತಡೆದು ಕೇಂದ್ರದ ವಿರುದ್ಧ ಧರಣಿ ಮಾಡಲಿದ್ದೇವೆ. ರೈತ ವಿರೋಧಿ ಮಸೂದೆಗಳ ವಾಪಸ್ಸ್ ಪಡೆಯುವಂತೆ ಸಾವಿರಾರು ರೈತರು ನ.26 ಹಾಗೂ 27ರಂದು ರೈತರಿಂದ ದೆಹಲಿ ಚಲೋ ನಡೆಸಲಿದ್ದಾರೆ. ಹಾಗಾಗಿ ಕೂಡಲೇ ರಾಜ್ಯ ಸರ್ಕಾರ ಅವೈಜ್ಞಾನಿಕ ಸುಗ್ರೀವಾಜ್ಞೆಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ರಾಜ್ಯಕ್ಕೆ 1ಲಕ್ಷ ಕೋಟಿ ಪ್ಯಾಕೇಜ್ ನೀಡುವಂತೆ ಒತ್ತಾಯ
ಕೇಂದ್ರ ಸರ್ಕಾರ ರಾಜ್ಯಕ್ಕೆ 1ಲಕ್ಷ ಕೋಟಿ ಪ್ಯಾಕೇಜ್ ನೀಡಬೇಕು. ಅತಿವೃಷ್ಠಿ, ಅನಾವೃಷ್ಠಿಗಳಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಬಡಗಲಪುರ ನಾಗೇಂದ್ರ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.
key words : BJP-defeated-by-elections-Farmer-leader-Badalpur -Nagendra-appeals