ಹುಬ್ಬಳ್ಳಿ,ಏಪ್ರಿಲ್,18,2023(www.justkannada.in): ಟಿಕೆಟ್ ಕೈತಪ್ಪಿದ್ದಕ್ಕೆ ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮಗೆ ಟಿಕೆಟ್ ಸಿಗದೆ ಇರುವುದಕ್ಕೆ ಕಾರಣ ಯಾರು ಎಂಬುದನ್ನ ಬಹಿರಂಗಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಗದೀಶ್ ಶೆಟ್ಟರ್, ನನಗೆ ಬಿಜೆಪಿ ಟಿಕೆಟ್ ಕೈತಪ್ಪಲು ಬಿ.ಎಲ್ ಸಂತೋಷ್ ಕಾರಣ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಟಿಕೆಟ್ ಘೋಷಣೆಯಾಗುವವರೆಗೆ ಸುಮ್ಮನ್ನಿದ್ದೆ. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ನನಗೆ ಟಿಕೆಟ್ ತಪ್ಪಲು ಮೂಲಕ ಕಾರಣ ಬಿಎಲ್ ಸಂತೋಷ್ ಎಂದು ಆರೋಪಿಸಿದರು.
ಬಿಜೆಪಿಯ ಕೆಲ ನಾಯಕರಿಂದ ನಾನು ನೋವು ಅನುಭವಿಸಿದ್ದೇನೆ. ಬಿಜೆಪಿಯಲ್ಲಿ ಹಲವು ದಿನಗಳಿಂದ ವೇದನೆ ಅನುಭವಿಸಿದ್ದೇನೆ. ಅಧಿಕಾರದ ಲಾಲಾಸೆ ಎಂದು ಟೀಕೆ ಮಾಡುತ್ತಿದ್ದಾರೆ. ಬೊಮ್ಮಾಯಿ ಸರ್ಕಾರದಲ್ಲಿ ನಾನು ಮಂತ್ರಿಯಾಗಲಿಲ್ಲ. ನಾನು ಸಿಎಂ ಆಗಿದ್ದಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನನ್ನ ಆಡಳಿತವನ್ನ ಸಿದ್ದರಾಮಯ್ಯ ಕೂಡ ಹೊಗಳಿದ್ದಾರೆ. ಸಿಎಂ ಆಗಿದ್ದಾಗ ರೈತರ ಸಾಲಮನ್ನಾ ಮಾಡಿದ್ದೇನೆ. ದಿನಗೂಲಿ ನೌಕರರನ್ನ ಖಾಯಂ ಮಾಡಿದ್ದೇನೆ. ಎಲ್ಲಾ ಜವಾಬ್ದಾರಿಯನ್ನ ನಿಭಾಯಿಸಿದ್ದೇನೆ ಎಂದು ತಿಳಿಸಿದರು.
Key words: BL Santhosh – reason – lost – BJP -ticket – Former CM -Jagdish Shettar.