ಬೆಂಗಳೂರು,ಮೇ,24,2021(www.justkannada.in): ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಜಿಲ್ಲಾಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡು ಬರುತ್ತಿದ್ದು, ಸೂಕ್ತ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಾವೇದ್ ಅಖ್ತರ್ ಈ ಆದೇಶ ಹೊರಡಿಸಿದ್ದಾರೆ.
ಸೂಕ್ತ ವ್ಯವಸ್ಥೆ ಹಾಗೂ ಸಾಮರ್ಥ್ಯ ಹೊಂದಿರುವ ತಾಲ್ಲೂಕು ಆಸ್ಪತ್ರೆಗಳಲ್ಲೂ ಸಹ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅನುಮತಿ ನೀಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಕೇವಲ ನಿಗದಿತ ಆಸ್ಪತ್ರೆಗಳಲ್ಲಿ ಮಾತ್ರವೇ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಲಭ್ಯವಾಗುತ್ತಿತ್ತು.
Key words: black fungus –case- increase- Hospitals- treatment -Permit