ಖಾಸಗಿ ಆಸ್ಪತ್ರೆಗಳಲ್ಲಿ  ಬ್ಲಾಕ್ ಫಂಗಸ್ ಚಿಕಿತ್ಸೆಗೆ ಸರ್ಕಾರದಿಂದಲೇ ದರ ನಿಗದಿ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಮೇ 5,2021(www.justkannada.in): ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರವನ್ನು ಸರ್ಕಾರದಿಂದಲೇ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.jk

ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹಾಗೂ ಸಿ.ವಿ.ರಾಮನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ  ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕಪ್ಪು ಶಿಲೀಂಧ್ರದ ಔಷಧಿಯ ಕೊರತೆ ಈಗ ಇಲ್ಲ. 15 ದಿನಗಳ ಹಿಂದೆ ಇದ್ದ ಕೊರತೆ ಈಗ ಇಲ್ಲ. ಕೇಂದ್ರದಿಂದ ದೊಡ್ಡ ಪ್ರಮಾಣದಲ್ಲಿ ಔಷಧಿ ಬಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಚಿಕಿತ್ಸೆಗಳನ್ನು ಉಚಿತಗೊಳಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ನಿರ್ದಿಷ್ಟ ದರ ನಿಗದಿಪಡಿಸಬೇಕಿದೆ. ಬೇಕಾದ ಹಾಗೆ ಹೆಚ್ಚು ಹಣ ಪಡೆಯುವಂತಿಲ್ಲ. ಇದಕ್ಕಾಗಿ ದರ ನಿಗದಿಪಡಿಸಲಾಗುವುದು. ಚಿಕಿತ್ಸಾ ವೆಚ್ಚಕ್ಕೆ ಇಷ್ಟೇ ಪಡೆಯಬೇಕು ಎಂದು ನಿಗದಿ ಮಾಡಲಾಗುವುದು ಎಂದರು.

ಸಿಎಸ್ ಆರ್ ಚಟುವಟಿಕೆಯಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಅಳವಡಿಸಲಾಗಿದೆ. ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲಿ 24 ಹಾಸಿಗೆಗಳ ಐಸಿಯು ಘಟಕ ಆರಂಭಿಸಲಾಗಿದೆ. ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ 77 ಹಾಸಿಗೆಗಳ ಐಸಿಯು, ಆಕ್ಸಿಜನ್ ಹಾಸಿಗೆ ಅಳವಡಿಸಲಾಗಿದೆ. ಜೊತೆಗೆ ಡಿಆರ್ ಡಿಒ ಸಂಶೋಧಿಸಿದ 1 ಸಾವಿರ ಲೀಟರ್ ಆಕ್ಸಿಜನ್ ಘಟಕವನ್ನು ಅಳವಡಿಸಲಾಗಿದೆ. ಇದು ವಾತಾವರಣದಿಂದ ಆಕ್ಸಿಜನ್ ಪಡೆದು 100 ಹಾಸಿಗೆಗಳಿಗೆ ಪೂರೈಕೆ ಮಾಡುತ್ತದೆ. ಇದನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಒಂದೇ ಭಾಗದಲ್ಲಿ ಹೆಚ್ಚು ಆಕ್ಸಿಜನ್, ಐಸಿಯು ವ್ಯವಸ್ಥೆ ಲಭ್ಯವಿದೆ. ಕೋವಿಡ್ ಪ್ರಕರಣ ಕಡಿಮೆಯಾದರೂ ಸಿದ್ಧತೆಗಳನ್ನು ಮಾಡಿಕೊಂಡಿರಬೇಕಾಗುತ್ತದೆ. ಸಿದ್ಧತೆಗಳನ್ನು ಮಾಡಿಕೊಳ್ಳುವುದು ರಾಜ್ಯ ಸರ್ಕಾರದ ಗಂಭೀರ ಚಿಂತನೆ. ಆ ನಿಟ್ಟಿನಲ್ಲಿ ಆಸ್ಪತ್ರೆಗಳ ಮೂಲಸೌಕರ್ಯ ಹೆಚ್ಚಿಸಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

Key words: Black fungus- treatment-private hospitals – charged – government-Minister- Dr. K. Sudhakar

ENGLISH SUMMARY…

77 ICU beds and oxygen generator unit set up in CV Raman General Hospital

24 ICU beds to come up in Epidemic Hospital

Treatment of black fungus to be included in Ayushman Bharat Arogya Karnataka Scheme

Bengaluru, May 5, Saturday

Government will soon cap the price for treatment of black fungus in government hospitals, said Health and Medical Minister Dr.K.Sudhakar.

He was speaking to media after visiting the CV Raman General Hospital and Epidemic Diseases Hospital in Bengaluru.

There is no shortage of medicine for treatment of black fungus. Centre has allocated more than 1000 vials. Black fungus patients get free treatment in all government hospital. Govt is also thinking to cap the price of treatment in private hospitals, he said.

100 ICU beds are being set up through CSR initiatives. 77 beds will come up at CV Raman General Hospital and another 24 ICU beds will come up at Epidemic Diseases Hospital. A 1000 LPM oxygen generator unit allocated through PM Cares Fund is being installed at CV Raman General Hospital. These will be inaugurated by CM BSY on Monday. The demand for beds has come down in Bengaluru as cases gave reduced. However government will continue to ramp up infrastructure to ensure preparedness for future waves, said Minister.