ಬೆಂಗಳೂರು,ಫೆಬ್ರವರಿ,23,2024(www.justkannada.in): ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ಅಂಧ ದಂಪತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೆಲಮಂಗಲದ ಯಂಟಗಾನಹಳ್ಳಿ ಬಳಿ ಈ ಘಟನೆ ನಡೆದಿದೆ. ಶ್ರೀಧರ್(52), ಅರ್ಚನಾ(36) ಮೃತಪಟ್ಟ ಅಂಧ ದಂಪತಿ. ಇನ್ನು ಘಟನೆಯಲ್ಲಿ ಬೈಕ್ ಸವಾರನಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಂಧ ದಂಪತಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಈ ಕುರಿತು ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: blind couple- died – bike- collision