ಹಾವೇರಿ,ಜ,20,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಂಡ ರಚಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ವಿಶೇಷ ತಂಡ ರಚಿಸಿ ಮಂಗಳೂರಿಗೆ ತೆರಳುವಂತೆ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಇದಕ್ಕೂ ಮುನ್ನ ಹಾವೇರಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಾಂಬ್ ಜತೆ ಇಂಥ ಶಕ್ತಿಗಳನ್ನ ನಿಷ್ಕ್ರಿಯಗೊಳಿಸಬೇಕು. ಇದರ ಹಿಂದಿರುವವರ ಪತ್ತೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬಾಂಬ್ ನಿಷ್ಕ್ರಿಯೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.
ಅನಾಮಧೇಯ ವ್ಯಕ್ತಿ ಬಾಂಬ್ ಇಟ್ಟಿದ್ದಾನೆ. ಏರ್ ಪೋರ್ಟ್ ನಲ್ಲಿ ಬ್ಯಾಗ್ ಇಟ್ಟಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Key words: Bomb detection -case -Mangalore airport-Home Minister- Basavaraja Bommai -instructs – special team