ಮುಂಬೈ,ಆಗಸ್ಟ್,23,2022(www.justkannada.in): ವಾಣಿಜ್ಯ ನಗರಿ ಮುಂಬೈನ ಪ್ರತಿಷ್ಠಿತ ಹೋಟೆಲೊಂದಕ್ಕೆ ಅಪರಿಚಿತ ವ್ಯಕ್ತಿಯೊಬ್ಬನಿಂದ ಬಾಂಬ್ ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆ ಮಾಡಿ ಲಲಿತ್ ಹೋಟೆಲ್ ನ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾನೆ. ಬಾಂಬ್ಗಳನ್ನು ನಿಷ್ಕ್ರಿಯಗೊಳಿಸಬೇಕಿದ್ದರೆ ₹ 5 ಕೋಟಿ ನೀಡಬೇಕೆಂದು ಡಿಮ್ಯಾಂಡ್ ಮಾಡಿದ್ದಾನೆ.
ಪ್ರಮುಖ ಹೋಟೆಲ್ ಸಂಬಂಧಿಸಿದ ಹುಸಿ ಬಾಂಬ್ ಬೆದರಿಕೆಯನ್ನು ಸೋಮವಾರ ಸಂಜೆ ಸ್ವೀಕರಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದು, ಈ ಕುರಿತು ಮುಂಬೈ ಪೊಲೀಸರು ಶಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: bomb -threat -call – prestigious hotel – Mumbai.