ಮಂಗಳೂರು,ಮೇ,4,2024 (www.justkannada.in): ಮಂಗಳೂರು ವಿಮಾನ ನಿಲ್ದಾಣದ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಆತಂಕ ಎದುರಾಗಿದೆ.
ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.
ಉಗ್ರರ ಹೆಸರಲ್ಲಿ ಇ-ಮೇಲ್ ಬಂದಿದ್ದು, ವಿಮಾನ ನಿಲ್ದಾಣದ ಆವರಣದಲ್ಲಿ ಆವರಣದಲ್ಲಿ ಸ್ಫೋಟಕಗಳನ್ನ ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ” ಎಂದು ಬೆದರಿಕೆ ಮೇಲ್ ಬಂದಿದೆ.
ಏಪ್ರಿಲ್ 29ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಚೇರಿಗೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರತಿ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ. ಅನುಮಾನ ಬಂದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇತ್ತೀಚೆಗೆ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಇ ಮೇಲೆ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು.
Key words: Bomb threat –Mangalore- airport