ನವದೆಹಲಿ,ಸೆ,14,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ರಕ್ತದೊತ್ತಡ ಹೆಚ್ಚಾಗಿದ್ದು ಈ ಹಿನ್ನೆಲೆ ಅವರನ್ನ ಆರ್ ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಮೂರು ದಿನಗಳಿಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೈಬಿಪಿಯಿಂದ ಬಳಲುತ್ತಿದ್ದಾರೆ. ಇನ್ನು ನಿನ್ನೆ ರೋಸ್ ಅವೆನ್ಯೂ ಕೋರ್ಟ್ ಡಿಕೆ ಶಿವಕುಮಾರ್ ಅವರಿಗೆ ಇಡಿ ಕಸ್ಟಡಿಯನ್ನ ಸೆಪ್ಟಂಬರ್ 17ರವರೆಗೆ ವಿಸ್ತರಣೆ ಮಾಡಿದ್ದು, ಅಗತ್ಯ ವೈದ್ಯಕೀಯ ಸೌಲಭ್ಯ ನೀಡುವಂತೆ ಇಡಿ ಅಧಿಕಾರಿಗಳಿಗೆ ಸೂಚಿಸಿದೆ.
ಹೈಬಿಪಿಯಿಂದ ಬಳಲುತ್ತಿರುವ ಹಿನ್ನೆಲೆ ಹೆಚ್ಚಿನ ಚಿಕಿತ್ಸೆ ಕೊಡಿಕ್ಕಾಗಿ ಇಡಿ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರನ್ನ ಆರ್ ಎಂಎಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ವಿಚಾರಣೆಗೆ ಬ್ರೇಕ್ ಬಿದ್ದಿದೆ.
Key words: BP- Former Minister- DK Shivakumar- Shift-RML Hospital.