ಮೈಸೂರು, ನ.22,2024: (www.justkannada.in news) ಸರ್ಕಾರಿ ನೌಕರರು, ಆದಾಯ ತೆರಿಗೆದಾರರನ್ನು ಬಿಪಿಎಲ್ ಕಾರ್ಡ್ ವ್ಯಾಪ್ತಿಯಿಂದ ಹೊರಗಿಡುವಂತೆ ಹೇಳಲಾಗಿದಯೇ ಹೊರತು ಬೇರೆ ಯಾರನ್ನು ಪಟ್ಟಿಯಿಂದ ಕೈಬಿಡುವಂತೆ ಸೂಚಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೇಳಿದಿಷ್ಟು..
ಪ್ರತಿಪಕ್ಷಗಳು ಜನತೆಯಲ್ಲಿ ಅನಗತ್ಯ ಗೊಂದಲ ಹುಟ್ಟುಹಾಕುತ್ತಿವೆ. ನಮ್ಮದು ಬಡವರ, ಶೋಷಿತರ ಪರ ಇರುವ ಸರಕಾರ. ನಮ್ಮ ಯೋಜನೆಗಳು ಬಡವರ ಕಲ್ಯಾಣಕ್ಕಾಗಿಯೇ ಇರುವಂತದ್ದು. ಪ್ರೊ ಪೂರ್ ಪ್ರೋಗ್ರಾಮ್ಸ್. (PRO POOR PROGRAMME) ಹಾಗಾಗಿ ಅರ್ಹರಿಗೆ ಮಾತ್ರ ಬಿಪಿಎಲ್ ಸವಲತ್ತು ಲಭಿಸಬೇಕು. ಶಕ್ತಿವಂತರಿಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಡ್ಡಿತುಂಡಾದಂತೆ ಸ್ಪಷ್ಟಪಡಿಸಿದರು.
ನಾವು ತೆರಿಗೆದಾರರು,ಸರ್ಕಾರಿ ನೌಕರರನ್ನ ಬಿಟ್ಟು ಬೇರೆಯಾರನ್ನೂ ಬಿಪಿಎಲ್ ಕಾರ್ಡಿನಿಂದ ತೆಗೆಯಬೇಡಿ ಸೂಚಿಸಿದ್ದೇನೆ. ಬಿಜೆಪಿಯವರು ರಾಜಕೀಯಕ್ಕಾಗಿ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ. ಬಿಜೆಪಿಗೆ ಬಡವರ ಕುರಿತು ಯಾವ ಕಾಳಜಿಯೂ ಇಲ್ಲ. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಯಾರು ಅವರೇ..? ಅದನ್ನು ಜಾರಿಗೆ ತಂದಿದ್ದು ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ . ರಾಜ್ಯಸಭೆಯಲ್ಲಿ ಈ ವಿಷಯ ಮಂಡಿಸಿದಾಗ ಮುರಳಿ ಮನೋಹರ್ ಜೋಶಿ ಅದನ್ನು ವಿರೋಧಿಸಿ ಭಾಷಣ ಮಾಡಿದ್ದಾರೆ. ಅದು ಆಹಾರ ಭದ್ರತಾ ಕಾಯ್ದೆಯಲ್ಲ, ಮತ ಭದ್ರತಾ ಕಾಯ್ದೆ ಎಂದು ಕರೆದಿದ್ದರು . ಅಂದರೆ ಆಹಾರ ಭದ್ರತಾ ಕಾಯ್ದೆಗೆ ಅವರು ವಿರೋಧವಾಗಿದ್ದರು. ಈಗ ಇವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ? ಬಿಜೆಪಿ ನಾಯಕರ ವಿರುದ್ಧ ಸಿಎಂ ವಾಗ್ದಾಳಿ.
ಬಿಪಿಎಲ್ ಕಾರ್ಡು ರೂಪಿಸಿರುವುದು ಬಡವರಿಗಾಗಿ
ಕರ್ನಾಟಕದಲ್ಲಿ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ಕೊಟ್ಟಿದ್ದು ಸಿದ್ದರಾಮಯ್ಯನ ಸರ್ಕಾರ. 7 ರಿಂದ 5 ಕೆ.ಜಿಗೆ ಇಳಿಸಿದ್ದು ಬಿ.ಎಸ್.ಯಡಿಯೂರಪ್ಪ. ಆಗ ಆರ್.ಅಶೋಕ್ ಅವರ ಸಚಿವ ಸಂಪುಟದಲ್ಲಿದ್ದರು. 2 ಕೆ.ಜಿಯನ್ನು ಕಡಿಮೆ ಮಾಡಿದಾಗ ಯಾಕೆ ಉಸಿರೆತ್ತಲಿಲ್ಲ. ಆಹಾರ ಭದ್ರತಾ ಕಾಯ್ದೆಯನ್ನು ವಿರೋಧಿಸಿದ ಬಿಜೆಪಿ ಬಡವರ ಬಗ್ಗೆ ಮಾತನಾಡುತ್ತಾರೆ.
ಆಹಾರ ಪದಾರ್ಥಗಳನ್ನು ಉಚಿತವಾಗಿ ಕೊಡಬೇಕೆಂದು ಯೋಜನೆ ಜಾರಿಗೆ ತಂದಿದ್ದು ನಾವು. ಸರ್ಕಾರಿ ನೌಕರರು, ತೆರಿಗೆದಾರರಿಗೆ ಬಿಪಿಎಲ್ ಕಾರ್ಡು ಕೊಡಬಾರದು ಎಂದು ಹೇಳಿದ್ದೇವೆ. ಈ ಯೋಜನೆ ಮಾಡಿರುವುದು ಬಡವರಿಗಾಗಿ. ಸರ್ಕಾರಿ ನೌಕರರು ಬಿಪಿಎಲ್ ಗೆ ಅರ್ಹರೇ? ನಾವು 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಾಡಿದ್ದಾರಾ? ಎಸ್.ಸಿ.ಎಸ್.ಪಿ/ಟಿಎಸ್.ಪಿ ಕಾಯ್ದೆಯನ್ನು ಎಲ್ಲಿಯಾದರೂ ಜಾರಿಗೆ ತಂದಿದ್ದಾರೆಯೇ? ಬಿಜೆಪಿಗೆ ಬಡವರ ಕುರಿತು ಯಾವ ಕಾಳಜಿಯೂ ಇಲ್ಲ.
key words: BPL card, poor, stepping back, CM, Siddaramaiah
BPL card is for the poor, there is no question of stepping back: CM to opposition