ಬೆಂಗಳೂರು,ಡಿಸೆಂಬರ್,28,2021(www.justkannada.in): ಬೆಂಗಳೂರಿನಲ್ಲಿ ಬಹಿರಂಗ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲಾಗಿದ್ದು ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಹೀಗಾಗಿ ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆಯಿಂದ ನಿಗಾ ವಹಿಸುತ್ತದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ಕೊರೋನಾ 3ನೇ ಅಲೆ ಒಮಿಕ್ರಾನ್ ಭೀತಿ ಹಿನ್ನೆಲೆ, ಸರ್ಕಾರ ನೈಟ್ ಕರ್ಫ್ಯೂ ಘೋಷಣೆ ಮಾಡಿದೆ. ನೈಟ್ ಕರ್ಫ್ಯೂ ಬಗ್ಗೆ ಪೊಲೀಸ್ ಇಲಾಖೆ ನಿಗಾ ವಹಿಸುತ್ತದೆ. ನಿನ್ನೆ ಆಯುಕ್ತರ ಜತೆ ಚರ್ಚೆ ಮಾಡಿದ್ದೇನೆ. ಹೋಂ ಗಾರ್ಡ್ ಮಾರ್ಷಲ್ ಗಳನ್ನ ಬಳಕೆ ಮಾಡಲಾಗುತ್ತದೆ. ಇನ್ನು ಮದ್ಯ ಮಾರಾಟದ ಮೇಲೆ ಅಬಕಾರಿ ಇಲಾಖೆ ನಿಗಾ ವಹಿಸುತ್ತದೆ ಎಂದು ತಿಳಿಸಿದರು.
ನಗರದಲ್ಲಿ ಕೊರೊನಾ ಹೆಚ್ಚುತ್ತಿದೆ. 2ನೇ ಅಲೆಯಲ್ಲೂ ಮೊದಲು ಸೋಂಕು ಕಡಿಮೆ ಇತ್ತು ನಂತರ ಏಕಾಏಕಿ ಹೆಚ್ಚಾಯಿತು . ಹೀಗಾಗಿ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಿದೆ ಕೊರೋನಾ ತಡೆಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಗೌರವ್ ಗುಪ್ತ ತಿಳಿಸಿದರು.
Key words: Break – New Year- celebration-BBMP Commissioner -Gaurav Gupta.