ಬೆಂಗಳೂರು,ಜು,26,2019(www.justkannada.in): ಬಹುಮತವಿಲ್ಲದಿದ್ದರೂ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಲು ಹೊರಟಿರುವುದು ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಿಎಸ್ ವೈ ಪ್ರಮಾಣವಚನಕ್ಕೆ ಆಕ್ಷೇಪ ವ್ಯಕ್ತಪಡಿಸಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಬಹುಮತ ಇಲ್ಲದೆ ಇದ್ದರೂ ಬಿಎಸ್ ವೈ ಮುಖ್ಯಮಂತ್ರಿಯಾಗಲು ಹೊರಟಿರುವುದು ಮತ್ತು ಅವರ ತರಾತುರಿಯ ನಿರ್ಧಾರವನ್ನ ರಾಜ್ಯಪಾಲರು ಒಪ್ಪಿರುವುದು ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಗೆಯೇ ಸಂವಿಧಾನದ ಬಗ್ಗೆ ಬಿಜೆಪಿಗೆ ನಂಬಿಕೆ ಇಲ್ಲ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ವಿರುದ್ದ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಇನ್ನು, ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರನ್ನ ಭೇಟಿಯಾಗಿ ಅನುಮತಿ ಕೋರಿದ್ದಾರೆ. ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನ ನೀಡಿದ್ದು, ಇಂದು ಸಂಜೆ 6.15ಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Key words: BS yeddyurappa -CM – deadly -development – democracy -Former CM- Siddaramaiah