ಮೈಸೂರು, ಸೆಪ್ಟೆಂಬರ್, 15, 2020 (www.justkannada.in) : ವಿಷ್ಣು ಸ್ಮಾರಕ ನಿರ್ಮಾಣ ಔಚಿತ್ಯಪೂರ್ಣವಾದದ್ದು. ಈಗಾಗಲೇ, ಸ್ಮಾರಕ ನಿರ್ಮಾಣ ಕಾಮಗಾರಿ ವಿಳಂಭವಾಗಿದೆ. ಸ್ಮಾರಕ ನಿರ್ಮಾಣಕ್ಕೆ ಸರಕಾರವು 11 ಕೋಟಿ ಬಿಡುಗಡೆ ಮಾಡಲಿದ್ದು, ಇಂದು 5 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಛೇರಿ ಕೃಷ್ಣಾದಿಂದ ದಿ.ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ (ಆನ್ಲೈರನ್ ಮೂಕಲಕ) ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾನಾಡಿದರು.
ಅಭಿಮಾನಿಗಳಿಗೆ ವಿಷ್ಣುವರ್ಧನ್ ಸಾಹಸಿಂಹ ಎಂದೇ ಪ್ರಸಿದ್ಧಿಯಾಗಿದ್ದು, ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಿಗಿಕೊಂಡಿದ್ದರು ಎಂದು ನೆನೆದರು.
ಡಾ|| ವಿಷ್ಣುವರ್ಧನ ಅವರ 70ನೇ ವರ್ಷದ ಹುಟ್ಟುಹಬ್ಬದ, ವಿಶೇಷ ಸಂಧರ್ಭದಲ್ಲಿ ದಿ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ವಿಷ್ಣುವರ್ಧನ್ ಕನ್ನಡ ನಾಡು ಕಂಡ ಅಪ್ರತಿಮ ಕಲಾವಿದರಲ್ಲಿ ಪ್ರಮುಖರಾಗಿದ್ದಾರೆ. ಶ್ರೇಷ್ಠ ನಾಯಕ ನಟರು ಮಾತ್ರವಲ್ಲದೇ ತಮ್ಮ ವ್ಯಕ್ತಿತ್ವದಲ್ಲೂ ಬಹಳಷ್ಟು ಶ್ರೇಷ್ಠ ಗುಣಗಳನ್ನು ಹೊಂದಿದ್ದು ಯುವಜನರಿಗೆ ಸ್ಪೂರ್ತಿಯ ಸೆಲೆಯಾಗಿದ್ದರು ಎಂದರು.
ತಮ್ಮ ಅಭಿಮಾನಿಗಳ ಪಾಲಿಗೆ “ಸಾಹಸ ಸಿಂಹ” ಎಂದೇ ಪ್ರಖ್ಯಾತರಾದ ವಿಷ್ಣು ತಮ್ಮ ಶಿಸ್ತು, ಸಂಯಮಗಳಿಂದ ಎಲ್ಲರ ಪ್ರೀತಿಯನ್ನು ಗೆದ್ದಿದ್ದರು. ಕನ್ನಡ ಚಿತ್ರರಂಗಕ್ಕೆ ಡಾ.ರಾಜ್ ಕುಮಾರ್ ಅವರ ನಂತರದ ಪೀಳಿಗೆಯಲ್ಲಿ ಮಹತ್ವದ ಕೊಡುಗೆ ನೀಡಿರುವವರಲ್ಲಿ ಡಾ.ವಿಷ್ಣುವರ್ಧನ್ ಅವರು ಸಹ ಸೇರುತ್ತಾರೆ.
ಸತತವಾಗಿ 38 ವರ್ಷಗಳ ಕಾಲ, ನೂರಾರು ಸದಭಿರುಚಿಯ ಚಿತ್ರಗಳನ್ನು ಮಾಡುವ ಮೂಲಕ ಜನರ ಮನಸಿನಲ್ಲಿ ಶಾಶ್ವತವಾದ ಸ್ಥಾನವನ್ನು ಪಡೆದುಕೊಂಡಿದ್ದಾರೆ. “ನಾಗರಹಾವು” ಸಿನಿಮಾದಿಂದ “ಆಪ್ತರಕ್ಷಕ” ಸಿನಿಮಾವರೆಗಿನ, ಅವರ ಸಾಧನೆ ಅಪಾರವಾಗಿದೆ.
ಆನ್ ಲೈನ್ ಮೂಲಕ ಸಚಿವ ಎಸ್.ಟಿ.ಸೋಮಶೇಖರ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಸುಧಾಕರ್, ಫಿಲಿಂ ಚೇಂಬರ್ ಅಧ್ಯಕ್ಷ ಜಯರಾಜ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕರುಗಳಾದ ಎಸ್.ಎ.ರಾಮದಾಸ್, ಜಿ.ಟಿ ದೇವೆಗೌಡ, ಜಿಲ್ಲಾಪಂಚಾಯತ್ ಅಧ್ಯಕ್ಷೆ ಪರಿಮಳಾ ಶ್ಯಾಮ್, ಜಿಲ್ಲಾಧಿಕಾರಿ ಬಿ.ಶರತ್ ಇತರರು ಉಪಸ್ಥಿತರಿದ್ದರು.
key words : BSY-drive-Vishnu-memorial-This-adventure-lion-sat