ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ಅನುದಾನ: ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ

ಬೆಂಗಳೂರು,ಮಾರ್ಚ್,7,2025 (www.justkannada.in): ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ಇಂದು ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು  ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ತರ್ಕಬದ್ಧಗೊಳಿಸಿ 5000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು ಎಂದು ಘೋಷಿಸಿದ್ದು ಈ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ.

Key words: 5 thousand crore, grant,  Kalyan Karnataka, development, Budget