ಬೆಂಗಳೂರು,ಜುಲೈ,20,2023(www.justkannada.in): ವಿಪಕ್ಷದವರು ಇಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು. ಖಾಲಿ ಕುರ್ಚಿಗಳಿಗೆ ಉತ್ತರ ನೀಡುತ್ತಿರುವುದು ದುಃಖದ ಸಂಗತಿ ಎಂದು ಸಿಎಂ ಸಿದ್ಧರಾಮಯ್ಯ ಅಸಮಾಧಾನ ಹೊರಹಾಕಿದರು.
ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಾನು 14 ಬಜೆಟ್ ಮಂಡಿಸಿದ್ದೇನೆ. ಇದೇ ಮೊದಲ ಸಲ ವಿಪಕ್ಷದವರು ಒಬ್ಬರೂ ಇಲ್ಲದ ಸಮಯದಲ್ಲಿ ಉತ್ತರ ಕೊಡುತ್ತಿದ್ದೇನೆ. ವಿಪಕ್ಷದವರ ಆಸನಗಳು ಖಾಲಿ ಇವೆ. ಈ ತರಹದ ಬಜೆಟ್ ಉತ್ತರ ಇದೇ ಮೊದಲು. ವಿಪಕ್ಷ ನಾಯಕ ಇಲ್ಲದೇ ಮೊದಲ ಸಲ ಬಜೆಟ್ ಅಧಿವೇಶನ ನಡೆದಿದೆ. ರಾಷ್ಟ್ರೀಯ ಪಕ್ಷ ಬಿಜೆಪಿಗೆ ಒಬ್ಬ ವಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲು ಆಗಿಲ್ಲ ಅಂದರೆ ಅದು ಪ್ರಜಾಪ್ರಭುತ್ವಕ್ಕೆ ಮಾರಕ. ಬಿಜೆಪಿಯವರಿಗೆ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವ ವ್ಯವಸ್ಥೆಗಳ ಮೇಲೆ ನಂಬಿಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಮೊದಲ ಸಲ ವಿಪಕ್ಷದವರಿಲ್ಲದ ಸಮಯದಲ್ಲಿ ಉತ್ತರ ನೀಡುತ್ತಿದ್ದೇನೆ. ಗಲಾಟೆ ಗೊಂದಲ ಪ್ರತಿಭಟನೆಯಲ್ಲಿ ಬಿಜೆಪಿ ಕಾಲಹರಣ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ವಿರೋಧಕ್ಕೆ ವಿರೋಧ ಮಾಡುವುದು ಸರಿಯಲ್ಲ. ಎಷ್ಟೇರಾಜಕೀಯ ಮಾಡಿದರೂ ನಾವು ಹೆದರಲ್ಲ. ಬಿಜೆಪಿಯವರಿಗೆ ಹೊಟ್ಟೆಯುರಿ ಶುರುವಾಗಿರುವುದು ಗ್ಯಾರಂಟಿಗಳಿಂದ. ಬಿಜೆಪಿಯ ಅವನತಿ ಕರ್ನಟಕದಿಂದ ಶುರುವಾಗಿದೆ ಬಿಜೆಪಿಯವರು ಮೋದಿ ಮೇಲೆ ಅವಲಂಬಿತರಾಗಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಹರಿಹಾಯ್ದರು.
Key words: budget- answering- opposition –empty- seats-session – CM Siddaramaiah