ನವದೆಹಲಿ,ಫೆ,1,2020(www.justkannada.in): ಇಂದು ಮಂಡನೆಯಾದ ಕೇಂದ್ರ ಬಜೆಟ್ ನಲ್ಲಿ ನೂತನ ಕೇಂದ್ರಾಡಳಿತ ಪ್ರದೇಶ ಲಡಾಖ್ ಗೆ ಕೇಂದ್ರ ಸರ್ಕಾರ ವಿಶೇಷ ಅನುದಾನ ಘೋಷಣೆ ಮಾಡಿದೆ.
ಜಮ್ಮು ಕಾಶ್ಮೀರಕ್ಕೆ 30,757 ಕೋಟಿ,ರೂ. ಹಾಗೂ ಲಡಾಕ್ ಅಭಿವೃದ್ದಿಗೆ 5,958 ಕೋಟಿ ರೂ ಅನುದಾನ ಮೀಸಲಿಡಲಾಗಿದೆ. ಜಮ್ಮು ಕಾಶ್ಮೀರ ಅಭಿವೃದ್ದಿಗೆ ಕೇಂದ್ರ ಸರ್ಕಾರ ಬದ್ಧ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ತಿಳಿಸಿದರು.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ರದ್ದುಪಡಿಸಿದ ಬಳಿಕ ಜಮ್ಮುಕಾಶ್ಮೀರ ಮತ್ತು ಲಡಾಖ್ ಅನ್ನ ನೂತನ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲಾಗಿತ್ತು. ಜಮ್ಮು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶವಾದ ಮೇಲೆ ಇದೇ ಮೊದಲ ಬಾರಿಗೆ ಬಜೆಟ್ನಲ್ಲಿ ಹಣ ಮೀಸಲಿಡಲಾಗಿದೆ.
Key words: budget-central government – grants – Jammu and Kashmir -Ladakh.