ಮೈಸೂರಿನಲ್ಲಿ ಚಿತ್ರನಗರಿ, ಹೈಟೆಕ್ ಬಸ್ ನಿಲ್ದಾಣ ಸ್ಥಾಪನೆ: ತವರು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಕೊಟ್ಟಿದ್ದೇನು..?

ಮೈಸೂರು,ಮಾರ್ಚ್,7,2025 ( www.justkannada.in):   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್ ನಲ್ಲಿ  ತವರು ಜಿಲ್ಲೆ ಮೈಸೂರಿಗೆ ಭರಪೂರ ಯೋಜನೆಗಳನ್ನ ಘೋಷಣೆ ಮಾಡಿದ್ದಾರೆ.

ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ,  ಮುಂದಿನ 3 ವರ್ಷಗಳ ಅವಧಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ  ಮಾಡಲಾಗುವುದು.  ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲಿಡುವುದಾಗಿ ಅಲ್ಲದೇ ಮೈಸೂರು ವಿಮಾನ ನಿಲ್ದಾಣ ರನ್‌ ವೇ ವಿಸ್ತರಣೆಗೆ ಭೂಸ್ವಾಧೀನಕ್ಕೆ 319 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ

ಮೈಸೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಛೇರಿ (ಅಠಾರ ಕಛೇರಿ) ಕಟ್ಟಡವನ್ನು ರಾಜ್ಯ ಮಟ್ಟದ ವಸ್ತುಸಂಗ್ರಹಾಲಯವಾಗಿ ಪರಿವರ್ತನೆ ಮಾಡಲಾಗುವುದು  ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಮೈಸೂರು ಏರ್​ಪೋರ್ಟ್​​ ರನ್​ವೇ ವಿಸ್ತರಣೆಗೆ ನಿರ್ಧರಿಸಲಾಗಿದೆ. ಭೂಸ್ವಾಧೀನಕ್ಕಾಗಿ 319 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ಬಜೆಟ್‌ನಲ್ಲಿ ಮೈಸೂರಿಗೆ ಸಿಕ್ಕಿದ್ದಿಷ್ಟು.

ಅಂತಾರಾಷ್ಟ್ರೀಯ ಮಾದರಿ ʻಚಿತ್ರ ನಗರಿʼ ಸ್ಥಾಪನೆಗೆ 500 ಕೋಟಿ ರೂ. ಮೀಸಲು

ಬನ್ನಿ ಮಂಟಪದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ಸ್ಥಾಪನೆ.

100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣ. ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ.
ರಾಜ್ಯ ಮಟ್ಟದ ವಸ್ತು ಸಂಗ್ರಹಾಲಯ.

ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ – ಭೂ ಸ್ವಾಧೀನಕ್ಕಾಗಿ 319 ಕೋಟಿ ರೂ. ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಮೂರು ಕೋಟಿ ರೂ. ಪ್ರೊ. ನಂಜುಂಡಸ್ವಾಮಿ ಸಂಶೋಧನ ಪೀಠ ಸ್ಥಾಪನೆ. ರೇಷ್ಮೆಗೂಡು ಮಾರುಕಟ್ಟೆ ಸ್ಥಾಪನೆ.
ಮೈಸೂರು ವಿವಿಯಲ್ಲಿ ತಾಳೆಗರಿ ಹಸ್ತಪ್ರತಿ ಡಿಜಿಟಲೀಕರಣಕ್ಕೆ 1 ಕೋಟಿ ರೂ.
ಮೈಸೂರಿನ ರಂಗಾಯಣಕ್ಕೆ 2 ಕೋಟಿ ರೂ. ಅನುದಾನ.

ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರ 100 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.
ಎಂಡೋಕ್ರೈನಾಲಜಿ ಕೇಂದ್ರ ಸ್ಥಾಪನೆ.
ಕುಸ್ತಿ, ವಾಲಿಬಾಲ್, ಖೋ ಖೋ ಅಕಾಡೆಮಿ ಸ್ಥಾಪನೆಗೆ 2 ಕೋಟಿ ರೂ. ಮೀಸಲು
ಪ್ರವಾಸಿಗರಿಗೆ ಪೌಷ್ಠಿಕ ಮೀನು ಖಾದ್ಯ ಒದಗಿಸಲು ಹೈಟೆಕ್ ಮತ್ಸದರ್ಶಿನಿ ಆರಂಭ.
ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳ ಐದು ವಸತಿ ಶಾಲೆ ಮೇಲ್ದರ್ಜೆಗೆ. ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳ ಉನ್ನತೀಕರಣಕ್ಕೆ 5 ಕೋಟಿ ರೂ.

ಕಬಿನಿ ನದಿಗೆ ಅಡ್ಡಲಾಗಿ ಹಾಗೂ ಕಪ್ಪಡಿ ಗ್ರಾಮದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ. ವರುಣದಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ 60 ಕೋಟಿ ರೂ. ಮೀಸಲು.
ಟಿ. ನರಸೀಪುರ ತಾಲ್ಲೂಕು ಕ್ರೀಡಾಂಗಣಕ್ಕೆ ಆರು ಕೋಟಿ ರೂ. ಮೈಸೂರಿನಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸ್ಥಾಪನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

Key words: Budget, Mysore,  CM, announces ambitious, plan