ನವದೆಹಲಿ,ಫೆಬ್ರವರಿ,1,2022(www.justkannada.in): ಆಭರಣ ಪ್ರಿಯರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಚಿನ್ನ ಮತ್ತು ವಜ್ರದ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ.
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಚಿನ್ನ-ವಜ್ರದ ಮೇಲಿನ ಸುಂಕ ಇಳಿಕೆ ಮಾಡಿ ಘೋಷಿಸಲಾಗಿದೆ. ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು, ರತ್ನಗಳ ಮೇಲಿನ ಸುಂಕ ಇಳಿಕೆ, ಕಸ್ಟಮ್ಸ್ ಸುಂಕವನ್ನು ಶೇ.5ಕ್ಕೆ ಇಳಿಸಲು ನಿರ್ಧಾರ ಮಾಡಲಾಗಿದ್ದು ಹೀಗಾಗಿ ಆಭರಣಗಳ ಮೇಲಿನ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.
ಇನ್ನು ಚಪ್ಪಲಿ, ಬಟ್ಟೆಗಳ ಮೇಲಿನ ಬೆಲೆನ ತೆರಿಗೆ ಇಳಿಕೆ ಮಾಡಲಾಗಿದೆ. ಮೊಬೈಲ್, ಮೊಬೈಲ್ ಚಾರ್ಜರ್ ಮೇಲಿನ ತೆರಿಗೆ ಕೂಡ ಇಳಿಕೆ ಮಾಡಲಾಗಿದೆ. ಇನ್ನೂ ವಜ್ರಾಭರಣಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲಾಗಿದೆ. ಕೃಷಿ ಉಪಕರಣ, ವಿದೇಶಿ ಉತ್ಪನ್ನಗಳ ಮೇಲಿನ ಬೆಲೆ, ಚರ್ಮದ ಉತ್ಪನ್ನಗಳ ಮೇಲಿನ ಬೆಲೆ, ಎಲೆಕ್ಟ್ರಾನಿಕ್ ಉಪ ಕರಣಗಳ ಬೆಲೆಯನ್ನೂ ಇಳಿಕೆ ಮಾಡಲಾಗಿದೆ.
Key words: budget-Reduction – gold – diamonds