ಬೆಂಗಳೂರು, ಮಾರ್ಚ್,08,2021(www.justkannada.in) : ಗುಣಮಟ್ಟದ ಬಿತ್ತನೆ ಬೀಜ ಲಭ್ಯತೆ, ಬೆಳೆ ನಿರ್ವಹಣೆ, ಕೊಯ್ಲೋತ್ತರ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ ಮಾರಾಟ ಹೀಗೆ ಪ್ರತಿ ಹಂತದಲ್ಲೂ ರೈತರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ ಬೆಂಬಲ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಬಜೆಟ್ ನಲ್ಲಿ ತಿಳಿಸಿದ್ದಾರೆ.2021-22ನೇ ಸಾಲಿನ ಆಯವ್ಯಯ ಮಂಡಿಸಿದ್ದು, ಅದರಲ್ಲಿ ಕೃಷಿ ಕ್ಷೇತ್ರಕ್ಕೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಕೃಷಿ ಹಾಗೂ ಪೂರಕ ಚಟುವಟಿಕೆಗೆ ಒಟ್ಟಾರೆ ಬಜೆಟ್ ನಲ್ಲಿ 31,028 ಕೋಟಿ. ರೂ. ಮೀಸಲು ಇಡಲಾಗಿದೆ. ಕೃಷಿಕರ ಆದಾಯವನ್ನು 2023ರ ವೇಳೆಗೆ ದ್ವಿಗುಣಗೊಳಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ಕೈಜೋಡಿಸಿ ಹಲವು ಕ್ರಮಗಳನ್ನು ಕೈಗೊಂಡಿದೆ.
“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಒಟ್ಟಾರೆ 7730 ಕೋಟಿ ರೂ. ಗಳ ಆರ್ಥಿಕ ನೆರವನ್ನು ವರ್ಗಾಯಿಸಲಾಗಿದೆ. ಈ ಯೋಜನೆಯಡಿ ದೇಶದಲ್ಲಿಯೇ ಅತ್ಯಂತ ಹೆಚ್ಚು ಆಧಾರ್ ದೃಢೀಕೃತ ಮಾಹಿತಿ (ಶೇ.97) ಹಾಗೂ ಆಧಾರ್ ಆಧಾರಿತ ನೇರ ನಗದು ವರ್ಗಾವಣೆಗಾಗಿ (ಶೇ.90) ರಾಜ್ಯವು ಕೇಂದ್ರ ಸರ್ಕಾರದ ಪ್ರಶಸ್ತಿಗೆ ಭಾಜನವಾಗಿದೆ.”
ಕೇಂದ್ರದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಕ್ರಮ
“ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಪ್ರಧಾನಮಂತ್ರಿ ಸಿಂಚಾಯಿ ಯೋಜನೆ ಮುಂತಾದ ಕೇಂದ್ರದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಕ್ರಮವಹಿಸಿದೆ. ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ 900 ಕೋಟಿ ರೂ. ಗಳನ್ನು ಹಾಗೂ ಪ್ರಧಾನಮಂತ್ರಿ ಸಿಂಚಾಯಿ ಯೋಜನೆಗೆ 831 ಕೋಟಿ ರೂ. ಗಳನ್ನು ಒದಗಿಸಲಾಗಿದೆ.”
ಮಾರುಕಟ್ಟೆ ಶುಲ್ಕವನ್ನು ಶೇ.1.5 ರಿಂದ ಶೇ.0.60ಗೆ ಇಳಿಕೆ
“ರಾಜ್ಯ ಸರ್ಕಾರವು ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಲು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ರೈತರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮಾರುಕಟ್ಟೆ ಶುಲ್ಕವನ್ನು ಶೇ.1.5 ರಿಂದ ಶೇ.0.60ಗೆ ಇಳಿಸಲಾಗಿದೆ. ಇದಲ್ಲದೇ, ಕೃಷಿ ಉತ್ಪನ್ನ ಸಂಗ್ರಹಣೆ ಹಾಗೂ ಸಂಸ್ಕರಣೆಗೆ ಕೂಡ ಆದ್ಯತೆ ನೀಡಿದೆ.”
“ಜನರಿಗೆ ಆರೋಗ್ಯಕರ ಹಾಗೂ ರಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಹಾಗೂ ಸಾವಯುವ ಕೃಷಿಯನ್ನು ಉತ್ತೇಜಿಸಲು 500 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಲಾಗುವುದು.” ಕೃಷಿ ನವೋದ್ಯಮಗಳ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲು ಹಾಗೂ ಸ್ಥಳೀಯ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕ್ ಅನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ರ್ಯಾಕ್ಟರ್ ಗಳಿಗೆ ಸಹಾಯಧನ
ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ.40 ರಿಂದ ಶೇ.50ಕ್ಕೆ ಹೆಚ್ಚಿಸಲಾಗುವುದು. “ರೈತರು ಮಿತವ್ಯಯದಲ್ಲಿ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ನೆರವಾಗುವಂತೆ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲಾಗುವುದು. ಈ ಉದ್ದೇಶಕ್ಕಾಗಿ ಯಂತ್ರೋಪಕರಣಗಳನ್ನು ಒದಗಿಸಲಾಗುವುದು. ವಿವಿಧ ಕೃಷಿ ಬೆಳೆಗಳನ್ನು ಒಕ್ಕಲು ಮಾಡಲು ಕಂಬೈನ್ಡ್ ಹಾರ್ವೆಸ್ಟರ್ ಗಳನ್ನೂ ಸಹ ಪೂರೈಸಲಾಗುವುದು. ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ರ್ಯಾಕ್ಟರ್ ಗಳಿಗೆ ಸಹಾಯಧನ ನೀಡುತ್ತಿದ್ದು, ಇದನ್ನು 25-45 PTO HP ಟ್ರ್ಯಾಕ್ಟರ್ ಗಳಿಗೂ ವಿಸ್ತರಿಸುವುದಾಗಿ ಪ್ರಸ್ತಾಪಿಸಲಾಗಿದೆ.
“ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಲು ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರದ ವಿತರಣೆ ಮಾಡಿ ಸಾವಯುವ ಇಂಗಾಲ ಹೆಚ್ಚಿರುವ ಅಭಿಯಾನ ಕಾರ್ಯಕ್ರಮವನ್ನು 75 ಕೋಟಿ ರೂ. ವೆಚ್ಚದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಉದ್ದೇಶಕ್ಕೆ 2021-22ನೇ ಸಾಲಿನಲ್ಲಿ 10 ಕೋಟಿ ರೂ, ಅನುದಾನವನ್ನು ಒದಗಿಸಲಾಗುವುದು.”
ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿಗೆ 50 ಕೋಟಿ ರೂ. ಹಂಚಿಕೆ
“ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿಯಲ್ಲಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಡಿಯಲ್ಲಿ ಶೇ.35ರಷ್ಟು ಸಹಾಯಧನವನ್ನು ವಿವಿಧ ಚಟುವಟಿಕೆಗಳಾದ ಶೀತಲಗೃಹ ನಿರ್ಮಾಣ, ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ನೀಡಲಾಗುತ್ತಿದೆ. ಈ ಸಹಾಯಧನವನ್ನು ಶೇ.50ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರವು ಶೇ.15ರಷ್ಟು ಹೆಚ್ಚುವರಿ ಸಹಾಯಧನ ನೀಡಲಿದೆ. ಈ ಯೋಜನೆಗೆ 50 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗುವುದು.”
ಕೊಪ್ಪಳ ಜಿಲ್ಲೆಯಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ
“ಅತ್ಯುತ್ತಮ ತರಬೇತಿ, ನೂತನ ಆವಿಷ್ಕಾರಗಳು ಹಾಗೂ ತಂತ್ರಜ್ಞಾನಗಳನ್ನು ಪರಿಚಯಿಸುವ ಮೂಲಕ ತೋಟಗಾರಿಕಾ ಬೆಳೆಗಾರರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡಲು ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗುವುದು.”
“ವಿನೂತನ ತಂತ್ರಜ್ಞಾನ, ಹೊಸ ಬೆಳೆ ತಳಿಗಳು, ಉತ್ತಮ ನಿರ್ವಹಣಾ ಪದ್ಧತಿಗಳನ್ನು ರೈತರಿಗೆ ಪರಿಚಯಿಸಲು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR) ಮತ್ತು ರಾಜ್ಯದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯ ಸಹಯೋಗದೊಂದಿಗೆ ಪ್ರಾತ್ಯಕ್ಷಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವುದು.”
ಸಣ್ಣ ಹಿಡುವಳಿದಾರರು ಜಮೀನಿನಲ್ಲಿ ತೋಟಗಾರಿಕೆ ಉಪಕಸುಬುಗಳು
ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರು ಜಮೀನಿನಲ್ಲಿ ತೋಟಗಾರಿಕೆ ಉಪಕಸುಬುಗಳನ್ನು ಕೈಗೊಳ್ಳುವ ಮೂಲಕ ಸುಸ್ಥಿರವಾಗಿ ಮತ್ತಿತರ ವರ್ಷವಿಡೀ ವರಮಾನ ಪಡೆಯಲು ‘ ಸಮಗ್ರ ಕೃಷಿ ಪದ್ಧತಿ ‘ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಆದ್ಯತೆ ನೀಡುವುದಾಗಿ ಸಿಎಂ ಬಜೆಟ್ ನಲ್ಲಿ ತಿಳಿಸಿದ್ದಾರೆ.
ಪ್ರಾತ್ಯಕ್ಷಿಕಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲಾಗುವುದು
ರೈತರಿಗೆ ಉತ್ತಮ ಗುಣಮಟ್ಟದ ಹೈಬ್ರಿಡ್ ಬೀಜ ಮತ್ತು ಬೀಜ – ಒದಗಿಸಲು ,ಹೈಬ್ರಿಡ್ ಬೀಜ ರೈತರಿಗೆ ನೀಡಲು ಹೈಬ್ರೀಡ್ ಬೀಜ ನೀತಿ. ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗುವುದು ವಿನೂತನ ತಂತ್ರಜ್ಞಾನ, ಹೊಸ ಬೆಳೆ ತಳಿಗಳು , ಉತ್ತಮ ನಿರ್ವಹಣಾ ಪದ್ಧತಿಗಳನ್ನು ರೈತರಿಗೆ ಪರಿಚಯಿಸಲು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ( ITHR ) ಮತ್ತು ರಾಜ್ಯದ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಪ್ರಾತ್ಯಕ್ಷಿಕಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.
ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ತೋಟಗಾರಿಕೆ ಉತ್ಪನ್ನಗಳಿಗೆ ಏಕರೂಪದ ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಿ ‘ ಬ್ರಾಂಡ್ ವ್ಯಾಲ್ಯೂ ‘ ಹೆಚ್ಚಿಸಲಾಗುವುದು . ಉತ್ಪಾದಕರ ಸಂಸ್ಥೆಗಳ ತೋಟಗಾರಿಕೆ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ , ಸಂಪರ್ಕ ಮತ್ತು ಪ್ರಚಾರಕ್ಕಾಗಿ ಏಕೀಕೃತ ಮಾರುಕಟ್ಟೆ ವೇದಿಕೆ ಕಲ್ಪಿಸಿ ತಂತ್ರಜ್ಞಾನ ಅಳವಡಿಕೆಯನ್ನು ಉತ್ತೇಜಿಸಲಾಗುವುದು.
ಏಕೀಕೃತ ಮಾರುಕಟ್ಟೆ ವೇದಿಕೆ ಕಲ್ಪಿಸಿ ತಂತ್ರಜ್ಞಾನ ಅಳವಡಿಕೆ
“ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ಮಾಡುವ ತೋಟಗಾರಿಕಾ ಉತ್ಪನ್ನಗಳಿಗೆ ಏಕರೂಪದ ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಿ ‘ಬ್ರಾಂಡ್ ವ್ಯಾಲ್ಯೂ’ ಹೆಚ್ಚಿಸಲಾಗುವುದು. ರೈತ ಉತ್ಪಾದಕರ ಸಂಸ್ಥೆಗಳ ತೋಟಗಾರಿಕೆ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ, ಸಂಪರ್ಕ ಮತ್ತು ಪ್ರಚಾರಕ್ಕಾಗಿ ಏಕೀಕೃತ ಮಾರುಕಟ್ಟೆ ವೇದಿಕೆ ಕಲ್ಪಿಸಿ ತಂತ್ರಜ್ಞಾನ ಅಳವಡಿಕೆಯನ್ನು ಉತ್ತೇಜಿಸಲಾಗುವುದು.”
‘ಸಮಗ್ರ ಕೃಷಿ ಪದ್ಧತಿ’ ಕಾರ್ಯಕ್ರಮ ಅನುಷ್ಠಾನ
“ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರು ಕಡಿಮೆ ಜಮೀನಿನಲ್ಲಿ ಕೃಷಿ, ತೋಟಗಾರಿಕೆ ಮತ್ತಿತರ ಉಪ ಕಸುಬುಗಳನ್ನು ಕೈಗೊಳ್ಳುವ ಮೂಲಕ ಸುಸ್ಥಿರವಾಗಿ ವರ್ಷವಿಡೀ ವರಮಾನ ಪಡೆಯಲು ‘ಸಮಗ್ರ ಕೃಷಿ ಪದ್ಧತಿ’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು.” ರೈತರಿಗೆ ಉತ್ತಮ ಗುಣಮಟ್ಟದ ಹೈಬ್ರಿಡ್ ಬೀಜ ಮತ್ತು ಬೀಜ ತಂತ್ರಜ್ಞಾನವನ್ನು ಸುಲಭವಾಗಿ ಒದಗಿಸಲು ಅವುಗಳ ಉತ್ಪಾದಕತೆ, ಲಾಭದಾಯಕತೆ ಮತ್ತು ಜನಪ್ರಿಯತೆಯನ್ನು ಹೆಚ್ಚಿಸಲು ಹೊಸ ಹೈಬ್ರಿಡ್ ಬೀಜ ನೀತಿಯನ್ನು ರೂಪಿಸಲಾಗುವುದು.
ಹಳದಿ ಎಲೆ ರೋಗದ ಕುರಿತು ಸಂಶೋಧನೆಗೆ 25 ಕೋಟಿ ರೂ.
“ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಜಿಲ್ಲೆಯ ಅಡಿಕೆ ಬೆಳೆಗಾರರನ್ನು ತೀವ್ರವಾಗಿ ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತು ಸಂಶೋಧನೆ ತೀವ್ರಗೊಳಿಸಲು ಹಾಗೂ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ ರೂ.ಗಳಲ್ಲಿ ಕಾರ್ಯಕ್ರಮವನ್ನು ಯೋಜಿಸಲಾಗುವುದು.” “ರಾಜ್ಯಾದಾದ್ಯಂತ ಸುವಾಸನೆಯುಕ್ತ ಮತ್ತು ವೈದ್ಯಕೀಯ ಗಿಡಗಳು, ಹಣ್ಣು ಹಂಪಲು, ತರಕಾರಿಗಳು ಮತ್ತು ಸಾಂಬಾರ ಪದಾರ್ಥಗಳಿಗಾಗಿ ಹೊಸ ಕೃಷಿ ರಫ್ತು ವಲಯ ಸ್ಥಾಪಿಸಲಾಗುವುದು. ಈ ಉತ್ಪನ್ನಗಳ ರಫ್ತಿಗೆ ಅನುವಾಗುವಂತೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು.”
‘ ಸಮಗ್ರ ಸಂಕುಲ ಸಮೃದ್ಧಿ ‘ ಯೋಜನೆ ಜಾರಿ
ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರು ಜಮೀನಿನಲ್ಲಿ ತೋಟಗಾರಿಕೆ ಉಪಕಸುಬುಗಳನ್ನುಹೊರರಾಜ್ಯದ ದೇಶಿ ತಳಿಗಳಾದ ಗಿರ್ , ಸಾಹಿವಾಲ್, ಒಂಗೋಲ್, ಥಾರ್ಪಾರ್ಕರ್ ಮತ್ತು ದೇವಣಿ ತಳಿಗಳನ್ನು ಅಭಿವೃದ್ಧಿಪಡಿಸಿ ರಾಜ್ಯದ ರೈತರಿಗೆ ಪರಿಚಯಿಸಲು ‘ ಸಮಗ್ರ ಸಂಕುಲ ಸಮೃದ್ಧಿ ‘ ಯೋಜನೆಯನ್ನು ಜಾರಿಗೊಳಿಸಲಾಗುವುದು, ಕೊಪ್ಪಳದಲ್ಲಿ ನಾರಿ ಸುವರ್ಣ ಕುರಿ ತಳಿಯ ಸಂವರ್ಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.
ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ವಿತರಣೆ
21ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ರ್ಯ ಸಂಪದ ಯೋಜನೆ ‘ ಯಡಿ ರಾಜ್ಯದ 137, ಸಾವಯವ ಮತ್ತು ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡಲು ಹಾಗೂ ರೈತರಿಗೆ ಗರಿಷ್ಠ ಬೆಲೆ ದೊರಕಿಸಲು ರಾಷ್ಟ್ರೀಯ ಇ – ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಅವಕಾಶ ಕಲ್ಪಿಸಲಾಗುವುದು . ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಲು ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ವಿತರಣೆ ಮಾಡಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮವನ್ನು 75 ಕೋಟಿ ರೂ . ವೆಚ್ಚದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು . ಈ ಉದ್ದೇಶಕ್ಕೆ 2021-22ನೇ ಸಾಲಿನಲ್ಲಿ 10 ಕೋಟಿ ರೂ . ಅನುದಾನವನ್ನು ಒದಗಿಸಲಾಗುವುದು .
ರೈತರಿಗೆ ಗರಿಷ್ಠ ಬೆಲೆಗೆ ರಾಷ್ಟ್ರೀಯ ಇ – ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಅವಕಾಶ
ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಪ್ರಧಾನ ಮಂತ್ರಿಗಳ ಕಿರು ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಡಿಯಲ್ಲಿ ಶೇ . 35 ರಷ್ಟು ಸಹಾಯಧನವನ್ನು ವಿವಿಧ ಚಟುವಟಿಕೆಗಳಾದ ಶೀತಲಗೃಹ ನಿರ್ಮಾಣ , ಕೊಯ್ಲೊತ್ತರ ನಿರ್ವಹಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ನೀಡಲಾಗುತ್ತಿದೆ . ಸಾವಯವ ಮತ್ತು ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡಲು ಹಾಗೂ ರೈತರಿಗೆ ಗರಿಷ್ಠ ಬೆಲೆ ದೊರಕಿಸಲು ರಾಷ್ಟ್ರೀಯ ಇ – ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
52 ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಲು ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ವಿತರಣೆ ಮಾಡಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮವನ್ನು 75 ಕೋಟಿ ರೂ . ವೆಚ್ಚದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು . ಈ ಉದ್ದೇಶಕ್ಕೆ 2021-22ನೇ ಸಾಲಿನಲ್ಲಿ 10 ಕೋಟಿ ರೂ . ಅನುದಾನವನ್ನು ಒದಗಿಸಲಾಗುವುದು.
ಶೀತಲಗೃಹ ನಿರ್ಮಾಣ , ಕೊಯ್ಲೊತ್ತರ ನಿರ್ವಹಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆ
ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಪ್ರಧಾನ ಮಂತ್ರಿಗಳ ಕಿರು ಸಂಸ್ಕರಣೆ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಡಿಯಲ್ಲಿ ಶೇ.35 ರಷ್ಟು ಸಹಾಯಧನವನ್ನು ವಿವಿಧ ಚಟುವಟಿಕೆಗಳಾದ ಶೀತಲಗೃಹ ನಿರ್ಮಾಣ , ಕೊಯ್ಲೊತ್ತರ ನಿರ್ವಹಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ನೀಡಲಾಗುತ್ತಿದೆ.
ಆಯವ್ಯಯ 2021-22 ಬೆಳೆಗಾರರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡಲು 57 , ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರು ಜಮೀನಿನಲ್ಲಿ ತೋಟಗಾರಿಕೆ ಉಪಕಸುಬುಗಳನ್ನು ಕೈಗೊಳ್ಳುವ ಮೂಲಕ ಸುಸ್ಥಿರವಾಗಿ ಮತ್ತಿತರ ವರ್ಷವಿಡೀ ವರಮಾನ ಪಡೆಯಲು ‘ ಸಮಗ್ರ ಕೃಷಿ ಪದ್ಧತಿ ‘ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು.
ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚನೆ
ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ತೋಟಗಾರಿಕೆ ಉತ್ಪನ್ನಗಳಿಗೆ ಏಕರೂಪದ ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಿ ‘ ಬ್ರಾಂಡ್ ವ್ಯಾಲ್ಯೂ ‘ ಹೆಚ್ಚಿಸಲಾಗುವುದು. ದ್ರಾಕ್ಷಿ ಬೆಳೆಯ ಮೌಲ್ಯವರ್ಧನೆ, ಬ್ರಾಂಡಿಂಗ್ ಹಾಗೂ ಮಾರ್ಕೆಟಿಂಗ್ ಕ್ಷೇತ್ರಗಳ ಉನ್ನತೀಕರಣವನ್ನು ಒಳಗೊಂಡಂತೆ ದ್ರಾಕ್ಷಿ ಕೃಷಿಯನ್ನು ಪ್ರೋತ್ಸಾಹಿಸಲು ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚಿಸುವುದಾಗಿಯೂ ಪ್ರಸ್ತಾಪಮಾಡಿದ್ದಾರೆ.
key words : budget-Agriculture-And-Supplement-activity-CM-B.S.Y-Preference