ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಕೇಸ್: ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆ

ಬೆಂಗಳೂರು,ಅಕ್ಟೋಬರ್,23,2024 (www.justkannada.in): ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಎನ್​ಡಿಆರ್​ಎಫ್​, ಎಸ್​ ಡಿಆರ್​ಎಫ್​ ಮತ್ತು ಅಗ್ನಿಶಾಮಕ ಸಿಬ್ಬಂದಿ‌ಯಿಂದ ಕಾರ್ಯಾಚರಣೆ ನಡೆಸಿದ್ದು,  ರಕ್ಷಣಾ ಕಾರ್ಯಾಚರಣೆ ವೇಳೆ 8 ಮೃತದೇಹಗಳು ಪತ್ತೆಯಾಗಿವೆ. ಬಿಹಾರ ಮೂಲದವಾರದ ಕಾರ್ಮಿಕ ಮೊಹಮ್ಮದ್ ಸಾಹಿಲ್​​, ತಿರುಪಾಲಿ, ಅರ್ಮಾನ್​​, ಶಂಕರ್​​, ಸತ್ಯರಾಜ್​, ಸೋಲೋ ಪಾಸ್ವಾನ್ ಮೃತರು. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

ಇಂದಿನ ಕಾರ್ಯಾಚರಣೆಯಲ್ಲಿ ಮತ್ತೆ 7 ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದು, ಆ ಮೂಲಕ ಸಾವಿನ ಸಂಖ್ಯೆ 8ಕ್ಕೇರಿದೆ. ಮೃತ ತ್ರಿಪಾಲ್‌ ನ ಮೃತದೇಹವನ್ನು ಅವಶೇಷಗಳಿಂದ ಸಿಬ್ಬಂದಿಗಳು ಹೊರತೆಗೆದಿದ್ದಾರೆ.

ನಿನ್ನೆ  ಮಧ್ಯಾಹ್ನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸಂಭವಿಸಿತ್ತು.  ಆರು ಅಂತಸ್ತಿನ ಕಟ್ಟಡ ನಿರ್ಮಾಣ ಕಾರ್ಯ ಕಳೆದ ಎಂಟು ತಿಂಗಳಿಂದ ನಡೆಯುತ್ತಿದೆ. ಆದರೆ ಕಟ್ಟಡ ಏಕಾಏಕಿ ಕುಸಿದುಬಿದ್ದಿದೆ.  ಈ ಕುರಿತು ಪ್ರಕರಣ ದಾಖಲಾಗಿದೆ. ಈ ಘಟನೆ ಸಂಭವಿಸುತ್ತಿದ್ದಂತೆಯೇ ಕಟ್ಟಡ ಮಾಲೀಕ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಕಟ್ಟಡದ ಮಾಲೀಕ ಮತ್ತು ಕಟ್ಟಡ ನಿರ್ಮಾಣದ ಉಸ್ತುವಾರಿ ಕಂಟ್ರಾಕ್ಟರ್ ಸೇರಿದ್ದಾರೆ ಎನ್ನಲಾಗಿದೆ.

Key words: Building, collapse case, Bangalore, 8 death