ಬೆಂಗಳೂರು, ಜನವರಿ, 2,2025 (www.justkannada.in): ಹೊಸ ವರ್ಷದ ಮೊದಲ ವಾರದಲ್ಲೆ ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ. ರಾಜ್ಯದಲ್ಲಿ ಬಸ್ ಪ್ರಯಾಣ ದರ ಶೇ 15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ ನಲ್ಲೇ ನಾಲ್ಕು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಅದರ ಬೆನ್ನಲ್ಲೇ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಬಿಎಂಟಿಸಿಯು ಈ ವರ್ಷ ಆಗಸ್ಟ್ನಲ್ಲಿ ಶೇಕಡಾ 42 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 2014 ರಲ್ಲಿ ಟಿಕೆಟ್ ದರ ಹೆಚ್ಚಳ ಆಗಿತ್ತು ಮತ್ತೆ ಹೆಚ್ಚಳ ಆಗಿರಲಿಲ್ಲ.
ಕೆಎಸ್ ಆರ್ ಟಿಸಿಯಿಂದ ಶೇಕಡಾ 25 ರಿಂದ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. 2020ರ ಫೆಬ್ರುವರಿಯಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು, ಬಳಿಕ ಮತ್ತೆ ಹೆಚ್ಚಳ ಮಾಡಿಲ್ಲ.
Key words: Bus fares, increase, 15 percent, Cabinet meeting