ಮೈಸೂರಿನ ಬನ್ನಿ ಮಂಟಪದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಅಸ್ತು.

ಮೈಸೂರು,ಮಾರ್ಚ್,3,2025 (www.justkannada.in):  ಮೈಸೂರಿನ ಬನ್ನಿ ಮಂಟಪದಲ್ಲಿ ಹೈಟೆಕ್ ಬಸ್ ನಿಲ್ದಾಣ ತಲೆ ಎತ್ತಲಿದ್ದು,  ಸುಮಾರು 127 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಅಸ್ತು ಎಂದಿದೆ.

ನಗರದ ಸಬರ್ಬನ್ ನಿಲ್ದಾಣದಿಂದ ವಾಹನ ದಟ್ಟನೆ ನಿಯಂತ್ರಣಕ್ಕೆ ಹೊಸ ಯೋಜನೆ ರೂಪಿಸಿದೆ.  ಸಬರ್ಬನ್ ನಿಲ್ದಾಣದಲ್ಲಿ ಪ್ರತಿನಿತ್ಯ  2700 ಕ್ಕೂ ಹೆಚ್ಚು ಬಸ್ ಗಳು ಸಂಚರಿಸುತ್ತವೆ. ಸ್ಥಳಾವಕಾಶದ ಕೊರತೆಯಿಂದಾಗಿ ಹೆಚ್ಚುವರಿ ಬಸ್ ನಿಲ್ದಾಣಕ್ಕೆ ಸರ್ಕಾರ ಮುಂದಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಏಪ್ರಿಲ್ ತಿಂಗಳಲ್ಲಿ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದೆ. ಇನ್ನೆರಡು ವರ್ಷಗಳಲ್ಲಿ ಹೊಸ ಬಸ್ ನಿಲ್ದಾಣ ಆಗಲಿದೆ.

ಬನ್ನಿಮಂಟಪದ 64 ಎಕರೆ ಪ್ರದೇಶದಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ 14 ಎಕರೆ ಪ್ರದೇಶದಲ್ಲಿ ಹೊಸ ಬಸ್ ನಿಲ್ದಾಣ ಕಟ್ಟಲಾಗುತ್ತದೆ ಗ್ರೌಂಡ್ ಫ್ಲೋರ್,ಸೇರಿದಂತೆ ಮೂರು ಹಂತಸ್ತಿನ ಕಟ್ಟಡ ನಿರ್ಮಾಣವಾಗಲಿದೆ. ಈಗಾಗಲೇ ಎಲ್ಲ ತಯಾರಿಗಳ ನಡೆದಿದೆ. ಸರ್ಕಾರದಿಂದ ಅನುದಾನ ಬಿಡುಗಡೆ ಆದ ತಕ್ಷಣ ಕೆಲಸ ಆರಂಭವಾಗಲಿದೆ ಎಂದು ಮೈಸೂರು ಗ್ರಾಮಾಂತರ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದರು.

ನಗರದ ಮಧ್ಯ ಭಾಗದಲ್ಲಿರುವ ಸಬರ್ಬನ್ ನಿಲ್ದಾಣವನ್ನ ಯಾವುದೇ ಕಾರಣಕ್ಕೂ ಸಂಪೂರ್ಣವಾಗಿ ಸ್ಥಳಾಂತರ ಮಾಡುವುದಿಲ್ಲ. ಕೇವಲ ಅಂತರ ರಾಜ್ಯ ಬಸ್ ಗಳನ್ನ ಅಲ್ಲಿಂದ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು,ಮಂಡ್ಯ, ಚಾಮರಾಜನಗರ, ಹಾಸನ ಭಾಗದ ಎಲ್ಲಾ ಬಸ್ ಗಳ ಸಂಚಾರ ಅಲ್ಲೇ ಇರುತ್ತದೆ. ಜನ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

Key words: government, build , high-tech bus stand, Mysore.