ಬೆಂಗಳೂರು,ಜನವರಿ,3,2023(www.justkannada.in): ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿಯನ್ನ ಬಂಧಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆ ನಡೆದಿದೆ. ಪ್ರದೀಪ್ ಪತ್ನಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. 1.5ಕೋಟಿ ಬಂಡವಾಳ ಹಾಕಿ ಒಂದು ಪೈಸೆನೂ ಲಾಭ ಬಂದಿಲ್ಲಎಂದಿದ್ದಾರೆ. ನಮ್ಮ ಹಣ ವಾಪಸ್ ಕೊಡಿಸಿ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಭಾಗದ ಶಾಸಕ ಲಿಂಬಾವಳಿ ಒಪ್ಪಂದ ಮಾಡಿಸಿದ್ರು ಲಿಂಬಾವಳಿ ಸೇರಿ 6 ಜನರ ಹೆಸರು ಕೇಳಿ ಬಂದಿದೆ. ಪೊಲೀಸರು ಹಣವನ್ನ ವಾಪಸ್ ಕೊಡಿಸಬೇಕು. ಲಿಂಬಾವಳಿ ಸೇರಿ 6 ಜನರನ್ನ ಅರೆಸ್ಟ್ ಮಾಡಬೇಕು ಪ್ರದೀಪ್ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಶಾಸಕರಾಗಲಿ ಯಾರೇ ಇರಲಿ ಬಂಧಿಸಬೇಕು. ಇಲ್ಲದಿದ್ದರೇ ಸಾಕ್ಷ್ಯ ನಾಶ ಮಾಡುತ್ತಾರೆ ಎಂದರು.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿ ಬಂದಿತ್ತು. ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿದ್ರು. ಹೀಗಾಗಿ ಇದೇ ರೀತಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಆಗಬಾರದು ಸರ್ಕಾರ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಅನೇಕ ಜನ ಸಾಯೋದು, ದಯಾಮರಣ ಕೇಳುತ್ತಿದ್ದಾರೆ ಇದಕ್ಕೆ ಸರ್ಕಾರದ ಭ್ರಷ್ಟಾಚಾರವೇ ಕಾರಣ ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.
Key words: Businessman -Pradeep –suicide- case- arrest – MLA -Arvind Limbavali- Siddaramaiah- demands