ಬೆಂಗಳೂರು,ಜನವರಿ,2,2023(www.justkannada.in): ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ತನಿಖೆಗೆ ಸಹಕರಿಸುತ್ತೇನೆ ಎಂದು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅರವಿಂದ ಲಿಂಬಾವಳಿ, ಆತ್ಮಹತ್ಯೆಗೆ ಶರಣಾದ ಪ್ರದೀಪ್ ನಮ್ಮ ಕಾರ್ಯಕರ್ತನೇ. ಚುನಾವಣೆಯಲ್ಲಿ ಸೋಶೀಯಲ್ ಮೀಡಿಯಾ ಗುತ್ತಿಗೆ ತೆಗೆದುಕೊಂಡಿದ್ದ ಪ್ರದೀಪ್ ವಾರ್ಡ್ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದ. ಜೂನ್, ಜುಲೈನಲ್ಲಿ ನಮ್ಮ ಪಕ್ಷದ ಕಚೇರಿಗೆ ಬಂದಿದ್ದ ಜನತಾ ದರ್ಶನದ ವೇಳೆ ನನ್ನ ಭೇಟಿಯಾಗಿದ್ದು ನಿಜ. ನನಗೆ ಸಮಸ್ಯೆಯಾಗಿದೆ ಎಂದು ನನ್ನ ಬಳಿ ಹೇಳಿದ್ದ. ಆತ ನೀಡಿದ್ದ ಸಂಖ್ಯೆಗೆ ಫೋನ್ ಮಾಡಿ ಹಣ ನೀಡುವಂತೆ ಹೇಳಿದ್ದೆ. ಪರಸ್ಪರ ಕುಳಿತು ಸಮಸ್ಯೆ ಬಗೆಹರಿಸುವಂತೆ ಸೂಚಮೆ ನೀಡಿದ್ದೆ. ಬಳಿಕ ಭೂಮಿ ಪೂಜೆಯಲ್ಲಿ ಆತನ ನನ್ನನ್ನ ಭೇಟಿಯಾಗಿದ್ದ. ಆಗ ಸಮಸ್ಯೆ ಬಗೆಹರಿದಿದೆ ಎಂದು ನನಗೆ ಥ್ಯಾಂಕ್ಸ್ ಹೇಳಿದ್ದ.
ನಂತರ ಕೌಟುಂಬಿಕ ಕಲಹದ ಬಗ್ಗೆಯೂ ನನಗೆ ಹೇಳಿದ್ದ. ಡೆತ್ ನೋಟ್ ನಲ್ಲಿ ನನ್ನ ಹೆಸರು ಉಲ್ಲೇಖಿಸಿದ್ದಾರೆ. ಪ್ರಕರಣದ ತನಿಖೆಗೆ ನಾನು ಸಂಪೂರ್ಣ ಸಹಕರಿಸುತ್ತೇನೆ. ಇಂತಹ ವಿಚಾರದಲ್ಲಿ ಸಹಾಯ ಮಾಡುವಾಗ ಎಚ್ಚರಿಕೆಯಿಂದ ಇರಿ ಎಂದು ಜನಪ್ರತಿನಿಧಿಗಳಿಗೆ ನಾನು ಸಲಹೆ ನೀಡುತ್ತೇನೆ. ಅನ್ಯಾಯವಾಗಿದೆ ಎಂದು ಯಾರೇ ಬಂದರೂ ಸಹಾಯ ಮಾಡುತ್ತೇನೆ. ಡೆತ್ ನೋಟಲ್ಲಿ ಉಲ್ಲೇಖಿಸಿರುವ ಆರೋಪಿಗಳು ನನಗೆ ಪರಿಚಯವಿದೆ. ನಾನು ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿಲ್ಲ. ಕೇವಲ ಫೋನ್ ನಲ್ಲಿ ಚರ್ಚೆ ಮಾಡಿದ್ದೆ. ಜನತಾ ದರ್ಶನದಲ್ಲಿ ಸಮಸ್ಯೆ ಹೇಳಿಕೊಂಡಿದ್ದಕ್ಕೆ ಸೆಟಲ್ ಮಾಡಿಕೊಳ್ಳಿ ಎಂದು ಒತ್ತಡ ಹಾಕಿದ್ದು ನಿಜ. ಸೂಕ್ತ ತನಿಖೆ ನಡೆಯಬಹುದು ಎಂದು ನನ್ನ ಹೆಸರು ಉಲ್ಲೇಖಿಸಿರಬಹುದು. ಈ ಪ್ರಕರಣದಲ್ಲಿ ನನ್ನ ಹೆಸರು ಸೇರಿಸಿದ್ದಕ್ಕೆ ಹೆಚ್ಚು ಮಹತ್ವ ಪಡೆದಿದೆ. ಸಂಧಾನದ ಹೆಸರಲ್ಲಿ ನನಗೆ ಹಣ ಕೊಟ್ಟಿದ್ದಾರೆ ಎಂಬುದು ಸುಳ್ಳು. ಸಮಸ್ಯೆ ಹೇಳಿಕೊಂಡು ಜನಪ್ರತಿನಿಧಿಗಳ ಬಳಿ ಬರುವುದು ಸಹಜ. ಆದ್ರೆ ಪ್ರದೀಪ್ ಆತ್ಮಹತ್ಯೆ ದಾರಿ ಹಿಡಿದಿದ್ದು ವಿ಼ಷಾದನೀಯ. ಪ್ರದೀಪ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅರವಿಂದ ಲಿಂಬಾವಳಿ ನುಡಿದರು.
Key words: businessman -Pradeep- suicide –case- cooperate – investigation-MLA -Arvinda Limbavali.