ಬೆಂಗಳೂರು,ಜುಲೈ,18,2022(www.justkannada.in): ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ.
ಅಗಸ್ಟ್ 11 ರಂದು ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜುಲೈ 25ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಆಗಸ್ಟ್ 1 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಗಸ್ಟ್ 4ರೊಳಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದಾಗಿದೆ. ಆಗಸ್ಟ್ 11 ರಂದು ಬೆಳಿಗ್ಗೆ 9 ರಿಂದ ಸಾಯಂಕಾಲ 4ರವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಸಿ.ಎಂ ಇಬ್ರಾಹಿಂ ಇತ್ತೀಚೆಗೆ ತಮ್ಮ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದರು. ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
Key words: by-election – Legislative Council – resignation – CM ibrahim