ಮೈಸೂರು,ಜ,28,2020(www.justkannada.in): ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂ.18ರ ಉಪಚುನಾವಣೆ ಹಿನ್ನೆಲೆ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಆರೋಗ್ಯ ಸಚಿವ ಶ್ರೀರಾಮುಲು ಬೆಂಬಲಿಗ ಎಂ.ಶಿವಪ್ರಕಾಶ್ ಸ್ಪರ್ಧೆ ಮಾಡುತ್ತಿದ್ದಾರೆ.
ಆರೋಗ್ಯ ಸಚಿವ ಶ್ರೀರಾಮುಲು ಬೆಂಬಲಿಗರಾಗಿರುವ ಎಂ.ಶಿವಪ್ರಕಾಶ್, ಬಿಜೆಪಿ ಪಕ್ಷ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದೆ. ಪಕ್ಷಕ್ಕೆ ಸಂಬಂಧವಿಲ್ಲದ ವ್ಯಕ್ತಿಗೆ ಟಿಕೆಟ್ ನೀಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ ವಾರ್ಡ್ ನಂ.18ರ ಉಪಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದಾರೆ.
ಬಿಜೆಪಿಯಿಂದ ಈಗಾಗಲೇ ರವೀಂದ್ರ ಬಿ.ವಿ. ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಂಡಾಯ ಬಿಜೆಪಿ ಅಭ್ಯರ್ಥಿಯಾಗಿ ಇಂದು ಶಿವಪ್ರಕಾಶ್ ನಾಮಪತ್ರ ಸಲ್ಲಿಸುತ್ತಿದ್ದಾರೆ. ನಾಮಪತ್ರಸಲ್ಲಿಕೆಗೂ ಮುನ್ನ 18 ನೇ ವಾರ್ಡ್ ನ ಮತದಾರರು ಹಾಗೂ ಬೆಂಬಲಿಗರೊಂದಿಗೆ ಒಂಟಿಕೂಪ್ಪಲಿನ ವೆಂಕಟೇಶ್ವರ ದೇವಾಲಯದ ಬಳಿ ಶಿವಪ್ರಕಾಶ್ ಸಭೆ ನಡೆಸಲಿದ್ದಾರೆ. ಸಭೆ ಬಳಿಕ ಬೆಂಬಲಿಗರೊಡನೆ ನಾಮಪತ್ರ ಸಲ್ಲಿಸಲಿದ್ದಾರೆ.
Key words: By-election -Mysore city corporation- Ward No.18-BJP- rebel candidate.