ಹಾವೇರಿ/ಬೆಳಗಾವಿ,ನ,21,2019(www.justkannada.in): ಬಿಜೆಪಿ ನಾಯಕರ ಮನವೊಲಿಕೆ ಪ್ರಯತ್ನದಿಂದಾಗಿ ಎರಡು ಉಪಚುನಾವಣಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರವನ್ನ ವಾಪಸ್ ಪಡೆಯುವ ಮೂಲಕ ಜೆಡಿಎಸ್ ನಾಯಕರಿಗೆ ಶಾಕ್ ನೀಡಿದ್ದಾರೆ.
ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರಟ್ಟೆಹಳ್ಳಿಯ ಕಬ್ಬಿಣ ಕಂತಿಮಠದ ಶ್ರೀಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿ ಮತ್ತು ಬೆಳಗಾವಿ ಜಿಲ್ಲೆ ಅಥಣಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಗುರು ದಾಶ್ಯಾಳ್ ನಾಮಪತ್ರ ವಾಪಸ್ ಪಡೆದಿದ್ದಾರೆ.
ನಾಮಪತ್ರ ವಾಪಸ್ ಪಡೆದ ಬಳಿಕ ಮಾತನಾಡಿದ ಶ್ರೀಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಜನರ ಆಶೋತ್ತರಗಳನ್ನ ಈಡೇರಿಸುವ ಬಗ್ಗೆ ಸಿಎಂ ಪುತ್ರ ರಾಘವೇಂದ್ರ ಭರವಸೆ ನೀಡಿದ್ದಾರೆ. ಹೀಗಾಗಿ ನಾಮಪತ್ರ ವಾಪಸ್ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.
ಜಿದ್ದಾಜಿದ್ದಿನ ಕಣವಾಗಿರುವ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗುರುದಾಶ್ಯಾಳ್ ಕೊನೆಗೂ ನಾಮಪತ್ರ ಹಿಂಪಡೆಯಲು ಸಮ್ಮತಿಸಿದ್ದಾರೆ. ಡಿಸಿಎಂ ಲಕ್ಷ್ಮಣ್ ಸವದಿಯವರ ಪರಮಾಪ್ತರಾಗಿರುವ ಗುರು ದಾಶ್ಯಾಳ್ ಮೂರು ದಿನಗಳ ಹಿಂದೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ದಿಢೀರನೇ ನಾಪತ್ತೆಯಾಗಿದ್ದರು. ನಾಮಪತ್ರ ಹಿಂಪಡೆಯುವಂತೆ ಬಿಜೆಪಿಯವರು ಒತ್ತಡ ಹಾಕಬಹುದೆಂದು ನಾಪತ್ತೆಯಾಗಿದ್ದರು.
ಇದೀಗ ಗುರು ದಶ್ಯಾಳ್ ಅವರನ್ನ ಸಂಪರ್ಕಿಸಿರುವ ಡಿಸಿಎಂ ಲಕ್ಷ್ಮಣ್ ಸವದಿ ಗುರು ದಶ್ಯಾಳ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಗುರು ದಶ್ಯಾಳ್ ನಾಮಪತ್ರ ವಾಪಸ್ ಪಡೆದಿದ್ದಾರೆ.
Key words: by-election- Nomination-return – two- JDS candidates