ಬೆಂಗಳೂರು,ಡಿ,4,2019(www.justkannada.in): ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು ಚುನಾವಣಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ನಾಳೆ 15 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಯಾಕ್ಷೇತ್ರಗಳ ಮತದಾರರು ತಪ್ಪದೇ ಮತದಾನ ಮಾಡಿ. ಶೇಕಡ 85ರಷ್ಟು ಮತದಾನವಾದರೆ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಮಳೆಗಾಳಿ, ಚಳಿ ಬಿಸಿಲೆನ್ನದೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗಳಿಗೆ ತೆರಳಿ ನಿಮ್ಮ ಹಕ್ಕು ಚಲಾಯಿಸಿ ಎಂದು ಮನವಿ ಮಾಡಿದ್ದಾರೆ.
ಹುಣಸೂರು, ಕೆ.ಆರ್ ಪೇಟೆ, ಯಶವಂತಪುರ, ಕೆಆರ್ ಪುರಂ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಚಿಕ್ಕಬಳ್ಳಾಪುರ, ಯಲ್ಲಾಪುರ, ಗೋಕಾಕ್, ಅಥಣಿ, ಕಾಗವಾಡ, ಹಿರೇಕೆರೂರು, ರಾಣಿಬೆನ್ನೂರು, ಹೊಸಪೇಟೆ, ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ನಾಳೆ ಮತದಾನ ನಡೆಯಲಿದ್ದು ಡಿಸೆಂಬರ್ 9 ರಂದು ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.
Key words: by election- Vote -large numbers- Appeal -CM BS Yeddyurappa